ADVERTISEMENT

10,12 ನೇ ತರಗತಿ ವಿದ್ಯಾರ್ಥಿಗಳು ಎರಡು ಬಾರಿ ಪರೀಕ್ಷೆಗೆ ಹಾಜರಾಗಲು ಅವಕಾಶ

ಪಿಟಿಐ
Published 19 ಫೆಬ್ರುವರಿ 2024, 20:01 IST
Last Updated 19 ಫೆಬ್ರುವರಿ 2024, 20:01 IST
ಕಾಮೆಡ್‌–ಕೆ ಪರೀಕ್ಷೆ–ಪ್ರಾತಿನಿಧಿಕ ಚಿತ್ರ
ಕಾಮೆಡ್‌–ಕೆ ಪರೀಕ್ಷೆ–ಪ್ರಾತಿನಿಧಿಕ ಚಿತ್ರ   

ರಾಯಪುರ: 2025–26ನೇ ಶೈಕ್ಷಣಿಕ ವರ್ಷದಿಂದ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ವರ್ಷಕ್ಕೆ ಎರಡು ಬಾರಿ ಬೋರ್ಡ್‌ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಸೋಮವಾರ ತಿಳಿಸಿದರು.

ಛತ್ತೀಸಗಢದಲ್ಲಿ ಮಾತನಾಡಿದ ಅವರು, ‘ರಾಷ್ಟ್ರೀಯ ಶಿಕ್ಷಣ ನೀತಿ–2020ರ ಅಡಿ ವಿದ್ಯಾರ್ಥಿಗಳ ಒತ್ತಡ ಕಡಿಮೆ ಮಾಡಿ, ಗುಣಮಟ್ಟದ ಶಿಕ್ಷಣ ನೀಡಬೇಕು. ಅವರನ್ನು ಭವಿಷ್ಯದಲ್ಲಿ ಒಳ್ಳೆಯ ಪ್ರಜೆಗಳನ್ನಾಗಿ ರೂಪಿಸಬೇಕು ಎಂಬುದು  ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮುಖ ಧ್ಯೇಯವಾಗಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT