ಬೆಂಗಳೂರು: ಕರ್ನಾಟಕದಲ್ಲಿಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬದಲಾವಣೆ ಆಗುತ್ತದೆ ಎಂಬ ಸುದ್ದಿಗಳ ಕುರಿತು ಬಿಜೆಪಿ ಹಿರಿಯ ರಾಷ್ಟ್ರೀಯ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಪ್ರತಿಕ್ರಿಯಿಸಿದ್ದು, 'ಸಿಎಂ ಬದಲಾವಣೆ ಮಾಡುವುದು ಸರಿಯಲ್ಲ' ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬುಧವಾರ ಈ ಕುರಿತು ಟ್ವೀಟ್ ಮಾಡಿರುವ ಅವರು, 'ಯಡಿಯೂರಪ್ಪ ಅವರು ಕರ್ನಾಟಕದಲ್ಲಿ ಮೊದಲ ಬಾರಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತಂದರು. ಆದರೆ, ಕೆಲ ಕುತಂತ್ರಿಗಳು ತಮ್ಮ ಚಮಚಾಗಿರಿ ಮಾಡದಿದ್ದುದ್ದಕ್ಕೆ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಿದರು' ಎಂದಿದ್ದಾರೆ.
ಅವರಿಲ್ಲದೆ ಬಿಜೆಪಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಅವರು ಬಿಜೆಪಿಗೆ ಮರಳಿದ ನಂತರವೇ ಗೆಲ್ಲಲು ಸಾಧ್ಯವಾಯಿತು. ಅದೇ ತಪ್ಪನ್ನು ಏಕೆ ಪುನರಾವರ್ತಿಸಬೇಕು? ಎಂದು ಬಿಜೆಪಿ ಹೈಕಮಾಂಡ್ ಉದ್ದೇಶಿಸಿ ಪ್ರಶ್ನೆ ಮಾಡಿದ್ದಾರೆ.
ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಬಿಜೆಪಿ ಹೈಕಮಾಂಡ್ ಕೆಳಗಿಳಿಸುತ್ತದೆ ಎಂಬ ವದಂತಿಗಳು ಎದ್ದಿರುವುದರಿಂದ ಪರ ವಿರೋಧ ಚರ್ಚೆಗಳು ಜೋರಾಗಿ ನಡೆದಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.