ADVERTISEMENT

ಅಫ್ಗಾನಿಸ್ತಾನದಲ್ಲಿ ಪುಲ್ವಾಮ ಮಾದರಿಯ ದಾಳಿ: 26 ಸೈನಿಕರ ಸಾವು

ಏಜೆನ್ಸೀಸ್
Published 29 ನವೆಂಬರ್ 2020, 7:09 IST
Last Updated 29 ನವೆಂಬರ್ 2020, 7:09 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಘಜ್ನಿ: ಅಫ್ಗಾನಿಸ್ತಾನದಲ್ಲಿ ಸೇನಾ ನೆಲೆಯನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಕಾರುಬಾಂಬ್‌ ಅನ್ನು ಸ್ಫೋಟಿಸಲಾಗಿದೆ. ಘಟನೆಯಲ್ಲಿ ಕನಿಷ್ಠ 26 ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅಫ್ಗಾನಿಸ್ತಾನದಲ್ಲಿ ಭದ್ರತಾಪಡೆಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಅತಿ ದೊಡ್ಡ ದಾಳಿ ಇದಾಗಿದೆ.

ಪೂರ್ವ ಅಫ್ಗಾನಿಸ್ತಾನದ ಘಜ್ನಿಯಲ್ಲಿ ಈ ದಾಳಿ ಸಂಭವಿಸಿದ್ದು, ಈ ಪ್ರದೇಶದಲ್ಲಿ ತಾಲಿಬಾನ್ ಉಗ್ರ ಪಡೆಗಳು ಮತ್ತು ಸೇನೆ ನಡುವೆ ನಿರಂತರವಾಗಿ ಘರ್ಷಣೆಗಳು ನಡೆಯುತ್ತಲೇ ಇರುತ್ತವೆ.

'ಈ ವರೆಗೆ 26 ಶವಗಳು ಸಿಕ್ಕಿವೆ. ಘಟನೆಯಲ್ಲಿ 17 ಮಂದಿ ಗಾಯಗೊಂಡಿದ್ದಾರೆ. ಅವರೆಲ್ಲರೂ ಭದ್ರತಾ ಸಿಬ್ಬಂದಿ' ಎಂದು ಘಜ್ನಿ ಆಸ್ಪತ್ರೆಯ ನಿರ್ದೇಶಕ ಬಾಜ್ ಮೊಹಮ್ಮದ್ ಹೆಮ್ಮತ್ ಸುದ್ದಿ ಸಂಸ್ಥೆ ಎಎಫ್‌ಪಿಗೆ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.