ಶಿಮ್ಲಾ: ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಅವರು ಇಂದು (ಭಾನುವಾರ) ಪ್ರಮಾಣ ವಚನ ಸ್ವೀಕರಿಸಿದರು.
ನಗರದಲ್ಲಿ ನಡೆದ ಸಮಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಉಪಸ್ಥಿತರಿದ್ದರು.
ಉಪ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನಾಯಕ ಮುಖೇಶ್ ಅಗ್ನಿಹೋತ್ರಿ ಪ್ರಮಾಣ ವಚನ ಸ್ವೀಕರಿಸಿದರು.
68 ಸದಸ್ಯಬಲದ ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ ಕಾಂಗ್ರೆಸ್ 40 ಸ್ಥಾನಗಳನ್ನು ಗಳಿಸಿದ್ದು, ಅಧಿಕಾರ ರಚನೆ ಮಾಡಿದೆ. ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಕಾಂಗ್ರೆಸ್‌ನಲ್ಲಿ ಮೂರು ದಿನಗಳ ರಾಜಕೀಯ ಮೇಲಾಟ ನಡೆದು ಅಂತಿಮವಾಗಿ ಸುಖ್ವಿಂದರ್ ಸಿಂಗ್ ಸುಖ್ಖು ಅವರನ್ನು ಆರಿಸಲಾಯಿತು.
ಸುಖ್ಖು ಅವರು ವಿಧಾನಸಭೆಚುನಾವಣೆಯಲ್ಲಿ ಕಾಂಗ್ರೆಸ್‌ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.