ನವದೆಹಲಿ: ಮುಂದಿನ ಮುಖ್ಯ ಚುನಾವಣಾ ಆಯುಕ್ತರಾಗಿ (ಸಿಇಸಿ) ಸುನಿಲ್ ಅರೋರಾ ನೇಮಕಗೊಂಡಿದ್ದು ಡಿ. 2ರಂದು ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಕಾನೂನು ಸಚಿವಾಲಯದ ಉನ್ನತ ಮೂಲಗಳು ಹೇಳಿವೆ.
ಈಗಿನ ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್ ಅವರು ಶನಿವಾರ ನಿವೃತ್ತರಾಗಲಿದ್ದಾರೆ. ಸುನಿಲ್ ಅವರ ನೇಮಕ ಕುರಿತು ಸದ್ಯದಲ್ಲೇ ಅಧಿಸೂಚನೆ ಹೊರಬೀಳಲಿದೆ. 2019ರ ಸಾರ್ವತ್ರಿಕ ಚುನಾವಣೆ ಅವರ ನೇತೃತ್ವದಲ್ಲೇ ನಡೆಯಲಿದೆ.
ಸುನಿಲ್ ನೇಮಕಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದ್ದು ಹೆಸರನ್ನು ರಾಷ್ಟ್ರಪತಿ ಭವನಕ್ಕೆ ಕಳುಹಿಸಿದೆ ಎಂದು ಮೂಲಗಳು ಸೋಮವಾರ ತಿಳಿಸಿವೆ.
ಸುನಿಲ್ ಅವರು 2017ರ ಆ. 21ರಂದು ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.