ನವದೆಹಲಿ: ಕ್ರಿಮಿನಲ್ ಪ್ರಕರಣದಲ್ಲಿ ತಮ್ಮ ದೋಷ ಸಾಬೀತುಪಡಿಸಿ ಹೊರಡಿಸಲಾಗಿರುವ ಆದೇಶವನ್ನು ತಡೆಹಿಡಿಯಲು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿರುವುನ್ನು ಪ್ರಶ್ನಿಸಿ ಸಮಾಜವಾದಿ ಪಕ್ಷದ (ಎಸ್‌ಪಿ) ನಾಯಕ ಆಜಂ ಖಾನ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.
ಆಜಂ ಖಾನ್ ಪರ ವಕೀಲರು ಸಲ್ಲಿಸಿದ್ದ ಮನವಿಯನ್ನು ಪರಿಗಣನೆಗೆ ತೆಗೆದುಕೊಂಡ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್. ನರಸಿಂಹನ್ ಅವರಿದ್ದ ಪೀಠವು, ಅರ್ಜಿಯ ವಿಚಾರಣೆಯನ್ನು ಶುಕ್ರವಾರ ನಡೆಸುವುದಾಗಿ ಹೇಳಿದೆ.
ಉತ್ತರ ಪ್ರದೇಶದ ಮೊರದಾಬಾದ್ ಜಿಲ್ಲೆಯಲ್ಲಿ 15 ವರ್ಷಗಳ ಹಿಂದೆ ಧರಣಿ ನಡೆಸುವ ವೇಳೆ ರಸ್ತೆಗಳನ್ನು ಬಂದ್ ಮಾಡಿದ್ದ ಪ್ರಕರಣದಲ್ಲಿ ಆಜಂ ಖಾನ್ ಅವರ ಪಾತ್ರ ಇರುವುದು ಸಾಬೀತಾಗಿತ್ತು. ಹೀಗಾಗಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆಯನ್ನೂ ವಿಧಿಸಲಾಗಿತ್ತು. ಇದರಿಂದಾಗಿ ಅವರು ಶಾಸಕ ಸ್ಥಾನದಿಂದ ಅನರ್ಹರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.