ADVERTISEMENT

ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್‌ ಖಾಲಿದ್‌ ಜಾಮೀನು ಅರ್ಜಿ ವಿಚಾರಣೆ ಮುಂದಕ್ಕೆ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2023, 14:19 IST
Last Updated 5 ಸೆಪ್ಟೆಂಬರ್ 2023, 14:19 IST
<div class="paragraphs"><p>ಉಮರ್‌ ಖಾಲಿದ್‌ </p></div>

ಉಮರ್‌ ಖಾಲಿದ್‌

   

ಪಿಟಿಐ

ನವದೆಹಲಿ: ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್‌ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ಒಂದು ವಾರ ಮುಂದೂಡಿತು. 2020ರಲ್ಲಿ ನಡೆದ ದೆಹಲಿ ಹಿಂಸಾಚಾರದಲ್ಲಿ ಪಿತೂರಿ ನಡೆಸಿದ ಆರೋಪದ ಮೇಲೆ ಖಾಲಿದ್‌ ವಿರುದ್ಧ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.  

ADVERTISEMENT

ಖಾಲಿದ್‌ ಪರ ವಕಾಲತ್ತು ವಹಿಸಿರುವ ಹಿರಿಯ ವಕೀಲ ಕಪಿಲ್‌ ಸಿಬಲ್‌ ಅವರು ವಿಚಾರಣೆ ವೇಳೆ ಲಭ್ಯರಿಲ್ಲದ ಕಾರಣ ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ದೀಪಂಕರ್‌ ದತ್ತಾ ಅವರನ್ನು ಒಳಗೊಂಡ ಪೀಠವು ವಿಚಾರಣೆಯನ್ನು ಮುಂದೂಡಿತು. 

ಇದಕ್ಕೂ ಹಿಂದೆ, ನ್ಯಾಯಮೂರ್ತಿ ಪ್ರಶಾಂತ್‌ ಕುಮಾರ್‌ ಮಿಶ್ರಾ ಅವರು ಆ.9ರಂದು ಜಾಮೀನು ಅರ್ಜಿಯ ವಿಚಾರಣೆಯಿಂದ ಹಿಂದೆ ಸರಿದಿದ್ದರು.

ಯುಎಪಿಎ ಪ್ರಕರಣದಲ್ಲಿ ಜಾಮೀನು ಕೋರಿ ಖಾಲಿದ್‌ ಸಲ್ಲಿಸಿದ್ದ ಅರ್ಜಿಯನ್ನು 2022ರ ಅಕ್ಟೋಬರ್‌ 18ರಂದು ದೆಹಲಿ ಹೈಕೋರ್ಟ್‌ ತಿರಸ್ಕರಿಸಿತ್ತು. ಇತರ ಆರೋಪಿಗಳ ಜತೆಗೆ ಖಾಲಿದ್‌ ನಿರಂತರ ಸಂಪರ್ಕದಲ್ಲಿದ್ದಾರೆ. ಅಲ್ಲದೇ, ಮೇಲ್ನೋಟಕ್ಕೆ ಅವರ ವಿರುದ್ಧ ಆರೋಪಗಳು ನಿಜವಾಗಿವೆ ಎಂದು ದೆಹಲಿ ಹೈಕೋರ್ಟ್‌ ಹೇಳಿತ್ತು.

ಖಾಲಿದ್‌ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ನ್ಯಾಯಮೂರ್ತಿ ಎ.ಎಸ್‌ ಬೋಪಣ್ಣ ಮತ್ತು ಪ್ರಶಾಂತ್‌ ಕುಮಾರ್‌ ಮಿಶ್ರಾ ಅವರ ಪೀಠವು ಮೊದಲಿಗೆ ಅರ್ಜಿಯ ವಿಚಾರಣೆ ನಡೆಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.