ನವದೆಹಲಿ: ಸುಪ್ರೀಂ ಕೋರ್ಟ್ ತನ್ನ ಎಲ್ಲಾ ಪ್ರಕರಣಗಳ ವಿಚಾರಣೆಯನ್ನು ಲೈವ್ ಸ್ಟ್ರೀಮಿಂಗ್ ಮಾಡಲು ಚಿಂತನೆ ನಡೆಸಿದೆ ಎಂದು ವರದಿಯಾಗಿದೆ.
ಸುಪ್ರೀಂ ಕೋರ್ಟ್ ಪ್ರಕರಣಗಳ ವಿಚಾರಣೆಯನ್ನು ಲೈವ್ ಸ್ಟ್ರೀಮಿಂಗ್ ಮಾಡುವ ನಿಟ್ಟಿನಲ್ಲಿ ಈಗಾಗಲೇ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ. ಜತೆಗೆ, ಲೈವ್ ಸ್ಟ್ರೀಮಿಂಗ್ ಕುರಿತಂತೆ ಅಪ್ಲಿಕೇಶನ್ ಅನ್ನು ಪರಿಶೀಲನೆ ನಡೆಸಿದೆ ಎಂದು ‘ಬಾರ್ ಅಂಡ್ ಬೆಂಚ್’ ವೆಬ್‌ಸೈಟ್ ವರದಿ ಮಾಡಿದೆ.
ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠದ ಅಡಿಯಲ್ಲಿನ ಎಲ್ಲಾ ವಿಚಾರಣಾ ಪ್ರಕ್ರಿಯೆಗಳನ್ನು 2022ರಿಂದ ಲೈವ್ ಸ್ಟ್ರೀಮಿಂಗ್ ಮಾಡಲಾಗುತ್ತಿದ್ದರೂ, ದಿನನಿತ್ಯದ ನ್ಯಾಯಾಲಯದ ಕಲಾಪಗಳನ್ನು ಲೈವ್ ಸ್ಟ್ರೀಮಿಂಗ್ ಮಾಡುತ್ತಿರುವುದು ಇದೇ ಮೊದಲು.
ಆದಾಗ್ಯೂ, ಸೈಬರ್ ಭದ್ರತೆಯನ್ನು ನಿರ್ವಹಿಸಬೇಕಾಗುತ್ತದೆ. ಕಳೆದ ತಿಂಗಳು ಸುಪ್ರೀಂ ಕೋರ್ಟ್ ಯೂಟ್ಯೂಬ್ ಚಾನೆಲ್ ಅನ್ನು ಹ್ಯಾಕ್ ಮಾಡಲಾಗಿತ್ತು. ಅದರ ಚಾನೆಲ್‌ನಲ್ಲಿ ಅಮೆರಿಕ ಮೂಲದ ರಿಪ್ಪಲ್ ಲ್ಯಾಬ್ಸ್ ಎಂಬ ಕಂಪನಿ ಅಭಿವೃದ್ಧಿಪಡಿಸಿದ ಕ್ರಿಪ್ಟೊ ಕರೆನ್ಸಿಯ ವಿಡಿಯೊಗಳು ಪ್ರಸಾರವಾಗಿದ್ದವು. ಬಳಿಕ ಚಾನೆಲ್ ಹ್ಯಾಕ್ ಆಗಿರುವ ಬಗ್ಗೆ ದೃಢಪಡಿಸಿದ ಕೋರ್ಟ್, ‘ಶೀಘ್ರವೇ ಚಾನೆಲ್ ಸೇವೆಯನ್ನು ಆರಂಭಿಸಲಾಗುತ್ತದೆ’ ಎಂದು ತನ್ನ ‘ಎಕ್ಸ್’ ಖಾತೆಯಲ್ಲಿ ಬರೆದುಕೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.