ADVERTISEMENT

ರಫೇಲ್ ಒಪ್ಪಂದ ಹೊಸ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2022, 15:47 IST
Last Updated 29 ಆಗಸ್ಟ್ 2022, 15:47 IST
ರಫೇಲ್‌
ರಫೇಲ್‌   

ನವದೆಹಲಿ:ಫ್ರಾನ್ಸ್‌ನ ಡಸಾಲ್ಟ್ ಏವಿಯೇಷನ್ ಸಂಸ್ಥೆ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ಹೊಸ ಮಾಹಿತಿ ಆಧರಿಸಿ, 2016ರಲ್ಲಿ ನಡೆದಿರುವ ರಫೇಲ್ ಯುದ್ಧ ವಿಮಾನಗಳ ಖರೀದಿ ಒಪ್ಪಂದದ ಬಗ್ಗೆ ವಿಚಾರಣೆಗೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ತಿರಸ್ಕರಿಸಿದೆ.

ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ಮತ್ತು ನ್ಯಾಯಮೂರ್ತಿ ಎಸ್.ರವೀಂದ್ರ ಭಟ್ ಅವರಿದ್ದ ಪೀಠವು, ಈ ಹಿಂದಿನ ತ್ರಿಸದಸ್ಯ ಪೀಠವು ನೀಡಿರುವ ತೀರ್ಪುಗಳನ್ನು ಗಮನದಲ್ಲಿಟ್ಟುಕೊಂಡು ಈ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲಾಗದು ಎಂದು ಹೇಳಿದೆ.

ಈ ಒಪ್ಪಂದದಲ್ಲಿ ಲಂಚದ ವ್ಯವಹಾರ ನಡೆದಿದೆ. ಇದನ್ನು ಸಿಬಿಐ ಮತ್ತು ಇ.ಡಿಯಿಂದ ತನಿಖೆ ಮಾಡಿಸಬಹುದು ಎಂದು ವಾದಿಸಿ ಅರ್ಜಿದಾರರಲ್ಲಿ ಒಬ್ಬರಾದ ಶರ್ಮಾ ಎಂಬುವವರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.