ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದ್ದು, 2024ರಲ್ಲಿ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿದೆ.
‘2024 ರ ಸೆಪ್ಟೆಂಬರ್ 30 ರೊಳಗೆ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಗೆ ಚುನಾವಣೆ ನಡೆಸಲು ಭಾರತದ ಚುನಾವಣಾ ಆಯೋಗವು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ನಾವು ನಿರ್ದೇಶಿಸುತ್ತೇವೆ’ ಎಂದು ಸಿಜೆಐ ಡಿ.ವೈ. ಚಂದ್ರಚೂಡ್ ಅವರು ತೀರ್ಪು ಪ್ರಕಟಿಸುವ ವೇಳೆ ಹೇಳಿದ್ದಾರೆ.
ಜತೆಗೆ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜ್ಯತ್ವವನ್ನು ಮರುಸ್ಥಾಪಿಸಲು ನಾವು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸುತ್ತೇವೆ ಎಂದು ಸಿಜೆಐ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.