ADVERTISEMENT

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ನವೆಂಬರ್ 2024, 7:34 IST
Last Updated 11 ನವೆಂಬರ್ 2024, 7:34 IST
<div class="paragraphs"><p>ಪ್ರಜ್ವಲ್ ರೇವಣ್ಣ</p></div>

ಪ್ರಜ್ವಲ್ ರೇವಣ್ಣ

   

ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾ ಮಾಡಿದೆ.

ನ್ಯಾ. ದೇಲಾ ಎಂ. ತ್ರಿವೇದಿ ಹಾಗೂ ನ್ಯಾ. ಸತೀಶ್‌ ಚಂದ್ರ ಶರ್ಮಾ ಅವರಿದ್ದ ಪೀಠವು, ಪ್ರಜ್ವಲ್‌ ಅತ್ಯಂತ ಪ್ರಭಾವಿ ಎಂಬುದನ್ನು ಪರಿಗಣಿಸಿ ಅರ್ಜಿ ತಿರಸ್ಕರಿಸಿದೆ.

ADVERTISEMENT

ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ್ದ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಪ್ರಜ್ವಲ್‌, ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ಪ್ರಜ್ವಲ್ ಪರ ವಾದ ಮಂಡಿಸಿದ ಮುಕುಲ್‌ ರೋಹಟಗಿ ಅವರು, ಪ್ರಕರಣ ಸಂಬಂಧ ಈಗಾಗಲೇ ಆರೋಪಪಟ್ಟಿ ಸಲ್ಲಿಕೆಯಾಗಿದೆ. ಪ್ರಜ್ವಲ್‌ ವಿರುದ್ಧ ಸಲ್ಲಿಕೆಯಾಗಿರುವ ಆರಂಭಿಕ ದೂರಿನಲ್ಲಿ ಐಪಿಸಿಯ ಸೆಕ್ಷನ್‌ 376ರ ಉಲ್ಲೇಖ ಇಲ್ಲ ಎಂದು ಕೋರ್ಟ್‌ಗೆ ಹೇಳಿದರು.

ಬಳಿಕ ಸುಪ್ರೀಂ ಕೋರ್ಟ್‌ ಪೀಠ, ಕರ್ನಾಟಕ ಹೈಕೋರ್ಟ್‌ ಜಾಮೀನು ನಿರಾಕರಿಸಿ ಅಕ್ಟೋಬರ್‌ 21ರಂದು ನೀಡಿರುವ ಆದೇಶದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದಿದೆ.

ಪ್ರಜ್ವಲ್‌ ವಿರುದ್ಧ ದಾಖಲಾಗಿರುವ ಅತ್ಯಾಚಾರ ಮತ್ತು ಕಿರುಕುಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), 2,144 ಪುಟಗಳ ಆರೋಪಪಟ್ಟಿಯನ್ನು ಆಗಸ್ಟ್‌ನಲ್ಲಿ ಸಲ್ಲಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.