ADVERTISEMENT

ನಕಲಿ ಜನನ ಪ್ರಮಾಣ ಪತ್ರ: ಅಜಂ ಖಾನ್‌ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಪಿಟಿಐ
Published 25 ಜುಲೈ 2022, 10:53 IST
Last Updated 25 ಜುಲೈ 2022, 10:53 IST
 ಅಜಂ ಖಾನ್‌
ಅಜಂ ಖಾನ್‌   

ನವದೆಹಲಿ: ನಕಲಿ ಜನನ ಪ್ರಮಾಣ ಪತ್ರ ಸಲ್ಲಿಕೆ ಪ್ರಕರಣ ಸಂಬಂಧ ತಮ್ಮ ಮಗನ ವಿರುದ್ಧ ಅಲಹಾಬಾದ್‌ ಹೈಕೋರ್ಟ್‌ ನೀಡಿದ್ದ ತೀರ್ಪು ಪ್ರಶ್ನಿಸಿ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಅಜಂ ಖಾನ್‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ಸೋಮವಾರ ತಿರಸ್ಕರಿಸಿದೆ.

‘ಹೈಕೋರ್ಟ್‌ ತೀರ್ಪಿನಲ್ಲಿ ಮಧ್ಯಪ್ರವೇಶಿಸುವುದಕ್ಕೆ ಸಾಧ್ಯವಿಲ್ಲ. ಅದಕ್ಕೆ ಅಗತ್ಯವಿರುವ ಸಕಾರಣಗಳೂ ಅರ್ಜಿಯಲ್ಲಿ ಇಲ್ಲ’ ಎಂದು ನ್ಯಾಯಮೂರ್ತಿಗಳಾದ ಹೇಮಂತ್‌ ಗುಪ್ತಾ ಮತ್ತು ವಿಕ್ರಂ ನಾಥ್‌ ಅವರಿದ್ದ ಪೀಠವು ಹೇಳಿತು.

ಅಜಂ ಖಾನ್‌ ಪುತ್ರ ಅಬ್ದುಲ್ಲಾ ಖಾನ್‌ ಅವರು ತಮ್ಮ ಜನ್ಮ ದಿನಾಂಕಕ್ಕೆ ಸಂಬಂಧಿಸಿದಂತೆ ಲಖನೌ ಹಾಗೂ ರಾಂಪುರದಿಂದ ನಕಲಿ ಪ್ರಮಾಣ ಪತ್ರಗಳನ್ನು ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಆಕಾಶ್‌ ಸಕ್ಸೇನಾ 2019ರ ಜನವರಿ 3ರಂದು ದೂರು ನೀಡಿದ್ದರು. ಈ ಸಂಬಂಧ ಗಂಜ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಗನ ಕೃತ್ಯಕ್ಕೆ ಅಜಂ ಖಾನ್‌ ಹಾಗೂ ಅವರ ಪತ್ನಿ ತಜೀನಾ ಫಾತೀಮಾ ಕೂಡ ಸಹಕಾರ ನೀಡಿದ್ದಾರೆ ಎಂದೂ ಆರೋಪಿಸಲಾಗಿತ್ತು.

ADVERTISEMENT

ಪ್ರಕರಣದ ವಿಚಾರಣೆ ನಡೆಸಿದ್ದ ಅಲಹಾಬಾದ್‌ ಹೈಕೋರ್ಟ್‌ ಮೂವರಿಗೂ ಜೈಲು ಶಿಕ್ಷೆ ವಿಧಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.