ADVERTISEMENT

ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಸುನೀಲ್‌ ದಮ್ಮಾನಿಗೆ ಸುಪ್ರೀಂಕೋರ್ಟ್‌ ಜಾಮೀನು

ಪಿಟಿಐ
Published 3 ಅಕ್ಟೋಬರ್ 2024, 13:48 IST
Last Updated 3 ಅಕ್ಟೋಬರ್ 2024, 13:48 IST
<div class="paragraphs"><p>ಸುಪ್ರೀಂಕೋರ್ಟ್‌</p></div>

ಸುಪ್ರೀಂಕೋರ್ಟ್‌

   

ಪಿಟಿಐ ಚಿತ್ರ

ನವದೆಹಲಿ: ಮಹದೇವ ಆನ್‌ಲೈನ್ ಬೆಟ್ಟಿಂಗ್ ಮತ್ತು ಗೇಮಿಂಗ್ ಆ್ಯಪ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಆಗಸ್ಟ್‌ ತಿಂಗಳಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೆ ಒಳಗಾಗಿದ್ದ ಛತ್ತೀಸಗಢದ ಉದ್ಯಮಿ ಸುನೀಲ್‌ ದಮ್ಮಾನಿಗೆ ಗುರುವಾರ ಸುಪ್ರೀಂಕೋರ್ಟ್‌ ಜಾಮೀನು ನೀಡಿದೆ.

ADVERTISEMENT

2023ರ ಆಗಸ್ಟ್‌ 23ರಿಂದ ಸುನೀಲ್‌ ದಮ್ಮಾನಿ ಜೈಲಿನಲ್ಲಿದ್ದಾರೆ. ಛತ್ತೀಸಗಢದ ಹೈಕೋರ್ಟ್‌ ಕೂಡ ದಮ್ಮಾನಿಗೆ ಜಾಮೀನು ನಿರಾಕರಿಸಿತ್ತು. ಹೀಗಾಗಿ ಅವರು ಜಾಮೀನು ಕೋರಿ ಸುಪ್ರೀಂಕೋರ್ಟ್‌ ಕದ ತಟ್ಟಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ, ಮನೋಜ್‌ ಮಿಶ್ರಾ, ಕೆಲವು ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.