ADVERTISEMENT

ಅತ್ಯಾಚಾರ ಪ್ರಕರಣ: ಮಲಯಾಳ ನಟ ಸಿದ್ದೀಕ್‌ಗೆ ನಿರೀಕ್ಷಣಾ ಜಾಮೀನು ಮಂಜೂರು

ಪಿಟಿಐ
Published 19 ನವೆಂಬರ್ 2024, 7:23 IST
Last Updated 19 ನವೆಂಬರ್ 2024, 7:23 IST
<div class="paragraphs"><p>ಮಲಯಾಳ ನಟ ಸಿದ್ದೀಕ್‌</p></div>

ಮಲಯಾಳ ನಟ ಸಿದ್ದೀಕ್‌

   

ನವದೆಹಲಿ: ನಟಿಯೊಬ್ಬರ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳ ನಟ ಸಿದ್ದೀಕ್‌ ಅವರಿಗೆ ಸುಪ್ರೀಂ ಕೋರ್ಟ್ ಇಂದು (ಮಂಗಳವಾರ) ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು, ಪಾಸ್‌ಪೋರ್ಟ್ ಅನ್ನು ಅಧಿಕಾರಿಗಳಿಗೆ ಒಪ್ಪಿಸಬೇಕು ಹಾಗೂ ತನಿಖೆಗೆ ಸಹಕರಿಸುವಂತೆ ಸಿದ್ದೀಕ್‌ ಅವರಿಗೆ ಸೂಚಿಸಿದೆ.

ADVERTISEMENT

2016ರಲ್ಲಿ ಸಿದ್ದೀಕ್ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ನಟಿಯೊಬ್ಬರು ನೀಡಿರುವ ದೂರನ್ನು ಆಧರಿಸಿ ಮ್ಯೂಸಿಯಂ ಪೊಲೀಸ್ ಠಾಣೆಯಲ್ಲಿ ನಟನ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದರು.

ಮಾಲಿವುಡ್‌ನ ಹಲವು ನಿರ್ದೇಶಕರು ಮತ್ತು ನಟರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕುರಿತಾದ ನಿವೃತ್ತ ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿಯು ಬಹಿರಂಗವಾದ ಬಳಿಕ ಚಿತ್ರರಂಗದ ಹೈ ಪ್ರೊಫೈಲ್ ವ್ಯಕ್ತಿ ವಿರುದ್ಧ ದಾಖಲಾದ ಎರಡನೇ ಎಫ್‌ಐಆರ್ ಇದಾಗಿದೆ. 2009ರಲ್ಲಿ ನಡೆದ ಘಟನೆಯೊಂದಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ನಟಿಯೊಬ್ಬರು ನೀಡಿದ ದೂರಿನ ಮೇರೆಗೆ ನಿರ್ದೇಶಕ ರಂಜಿತ್ ವಿರುದ್ಧ ಐಪಿಸಿ ಸೆಕ್ಷನ್ 354ರ (ಮಹಿಳೆಯರ ಮೇಲಿನ ದೌರ್ಜನ್ಯ) ಅಡಿ ಮೊದಲ ಪ್ರಕರಣ ದಾಖಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.