ADVERTISEMENT

ಚಿದಂಬರಂಗಿಲ್ಲ ರಿಲೀಫ್: ಜಾಮೀನು ಅರ್ಜಿ ವಿಚಾರಣೆ 26ಕ್ಕೆ ಮುಂದೂಡಿದ ಸುಪ್ರೀಂ

ಇ.ಡಿ.ಗೆ ನೋಟಿಸ್

ಏಜೆನ್ಸೀಸ್
Published 20 ನವೆಂಬರ್ 2019, 5:30 IST
Last Updated 20 ನವೆಂಬರ್ 2019, 5:30 IST
ಪಿ.ಚಿದಂಬರಂ
ಪಿ.ಚಿದಂಬರಂ   

ನವದೆಹಲಿ:ಕಾಂಗ್ರೆಸ್‌ನ ಹಿರಿಯ ಮುಖಂಡ ಪಿ.ಚಿದಂಬರಂಸಲ್ಲಿಸಿರುವ ಜಾಮೀನು ಅರ್ಜಿಗೆ ಸಂಬಂಧಿಸಿ ಪ್ರತಿಕ್ರಿಯೆ ನೀಡುವಂತೆ ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಸುಪ್ರೀಂ ಕೋರ್ಟ್ ಬುಧವಾರ ನೋಟಿಸ್ ನೀಡಿದೆ.

ಐಎನ್‌ಎಕ್ಸ್ ಮೀಡಿಯಾಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂದಿಸಿ ಚಿದಂಬರಂ ಸಲ್ಲಿಸುವ ಜಾಮೀನು ಅರ್ಜಿಯ ಮುಂದಿನ ವಿಚಾರಣೆಯನ್ನು ಇದೇ 26ಕ್ಕೆ ನಡೆಸಲಾಗುವುದು ಎಂದು ಕೋರ್ಟ್ ತಿಳಿಸಿದೆ. ಜಾಮೀನು ತಿರಸ್ಕರಿಸಿ ದೆಹಲಿ ಹೈಕೋರ್ಟ್ ಈಚೆಗೆ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಚಿದಂಬರಂ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇ.ಡಿ. ದಾಖಲಿಸಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಚಿದಂಬರಂ ಅವರು ತಿಹಾರ್ ಜೈಲಿನಲ್ಲಿದ್ದಾರೆ. ಐಎನ್‌ಎಕ್ಸ್‌ ಮೀಡಿಯಾ ಪ್ರರಣಕ್ಕೆ ಸಂಬಂಧಿಸಿ 2017ರ ಮೇನಲ್ಲಿ ಸಿಬಿಐ ದಾಖಲಿಸಿದ್ದ ಪ್ರಕರಣದಲ್ಲಿ ಅವರನ್ನು ಆಗಸ್ಟ್ 21ರಂದು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಈಗಾಗಲೇ ಜಾಮೀನು ನೀಡಿದೆ. ಆದರೆ, ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ‍್ರಕರಣದಲ್ಲಿ ಜಾಮೀನು ದೊರೆತಿರುವುದರಿಂದ ಅವರು ಜೈಲಿನಲ್ಲೇ ಇರಬೇಕಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.