ADVERTISEMENT

ಸಾಮಾನ್ಯ ಪಠ್ಯಕ್ರಮಕ್ಕೆ ಕೋರಿ ಸಲ್ಲಿಕೆಯಾಗಿದ್ದ ಪಿಐಎಲ್‌ ವಜಾಗೊಳಿಸಿದ ‘ಸುಪ್ರೀಂ’

ಪಿಟಿಐ
Published 11 ಫೆಬ್ರುವರಿ 2022, 11:13 IST
Last Updated 11 ಫೆಬ್ರುವರಿ 2022, 11:13 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ದೇಶದಾದ್ಯಂತ ಮಕ್ಕಳಿಗೆ ‘ಸಾಮಾನ್ಯ ಪಠ್ಯಕ್ರಮ’ ಪರಿಚಯಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ.

ಈ ಕುರಿತು ಅರ್ಜಿದಾರರು ಹೈಕೋರ್ಟ್‌ನ ಮೊರೆ ಹೋಗಬಹುದು ಎಂದುನ್ಯಾಯಮೂರ್ತಿಗಳಾದ ಎಲ್‌. ನಾಗೇಶ್ವರರಾವ್‌ ಮತ್ತು ಬಿ.ಆರ್‌. ಗವಾಯಿ ಅವರ ಪೀಠವು ಅರ್ಜಿದಾರರಾದ ವಕೀಲ ಅಶ್ವಿನಿ ಉಪಾಧ್ಯಾಯ ಅವರಿಗೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT