ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ತಮಗೆ ವಿಧಿಸಲಾಗಿರುವ ಜೀವಾವಧಿ ಶಿಕ್ಷೆಯನ್ನು ಅನಾರೋಗ್ಯದ ಕಾರಣದಿಂದಾಗಿ ಕಡಿತಗೊಳಿಸಬೇಕು ಎಂದು ಕೋರಿ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ನ್ಯಾಯಮೂರ್ತಿಗಳಾದ ಸಂಜೀವ ಖನ್ನಾ ಹಾಗೂ ದೀಪನ್‌ಕರ್ ದತ್ತಾ ಅವರಿದ್ದ ಪೀಠ ಅಸಾರಾಂ ಬಾಪು ಅರ್ಜಿಯ ವಿಚಾರಣೆ ನಡೆಸಿತು.
ಮಹಾರಾಷ್ಟ್ರದ ಮಾಧವಬಾಗ್ ಹಾರ್ಟ್ ಹಾಸ್ಟಿಟಲ್‌ನಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದುಕೊಂಡೇ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸುವಂತೆ ಅಸರಾಂ ಪರ ಹಾಜರಿದ್ದ ವಕೀಲರು ಪೀಠವನ್ನು ಕೋರಿದರು. ಇದನ್ನು ರಾಜಸ್ಥಾನ ಹೈಕೋರ್ಟ್‌ನಲ್ಲೇ ಕೋರುವಂತೆ ಸುಪ್ರೀಂ ಕೋರ್ಟ್ ಸಲಹೆ ನೀಡಿತು.
ಪ್ರಕರಣದಲ್ಲಿ ಶಿಕ್ಷೆಯ ವಿರುದ್ಧ ಹೈಕೋರ್ಟ್‌ನಲ್ಲಿ ಸಲ್ಲಿಸಲಾದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ವಿಳಂಬಗೊಳಿಸಲು ಅಸಾರಾಂ ಮಾಡಿದ ಉದ್ದೇಶಪೂರ್ವಕ ಪ್ರಯತ್ನಗಳನ್ನು ನ್ಯಾಯಮೂರ್ತಿ ಖನ್ನಾ ಅವರು ಇದೇ ವೇಳೆ ಉಲ್ಲೇಖಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.