ನವದೆಹಲಿ: ಭೂ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಜಾಮೀನು ಮಂಜೂರು ಮಾಡಿದ ಜಾರ್ಖಂಡ್ ಹೈಕೋರ್ಟ್ ಆದೇಶ ಕುರಿತು ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಹೇಮಂತ್ ಸೊರೇನ್‌ಗೆ ಜಾಮೀನು ಮಂಜೂರು ಮಾಡಿದ ಜಾರ್ಖಂಡ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಹೇಮಂತ್ ಸೊರೇನ್ ಅವರು ಜನವರಿ 31ರಂದು ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿದ್ದರು. ಅದಕ್ಕೂ ಕೆಲ ಸಮಯದ ಮುನ್ನ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ ಬಳಿಕ ಅವರು ಜೂನ್ 28ರಂದು ಜೈಲಿನಿಂದ ಬಿಡುಗಡೆಯಾಗಿದ್ದರು. ಜುಲೈ 4ರಂದು ಅವರು ಪುನಃ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.