ನವದೆಹಲಿ: ಹೆಣ್ಣುಮಕ್ಕಳು ಲೈಂಗಿಕ ಪ್ರಚೋದನೆಗಳನ್ನು ನಿಯಂತ್ರಿಸಬೇಕು ಎಂಬ ಕಲ್ಕತ್ತ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ.
ಪ್ರೇಮ ಸಂಬಂಧ ಹೊಂದಿರುವ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಹೈಕೋರ್ಟ್‌ನಿಂದ ಖುಲಾಸೆಗೊಂಡಿದ್ದ ವ್ಯಕ್ತಿಯ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ಈ ಬಗ್ಗೆ ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.
ಪ್ರೇಮ ಸಂಬಂಧ ಹೊಂದಿದ್ದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಶಿಕ್ಷೆಗೆ ಗುರಿಯಾಗಿದ್ದ ಯುವಕನನ್ನು ಕಲ್ಕತ್ತ ಹೈಕೋರ್ಟ್ ಖುಲಾಸೆಗೊಳಿಸಿತ್ತು. ಪ್ರಕರಣದ ವಿಚಾರಣೆ ವೇಳೆ ಬಾಲಕಿ ತನ್ನ ಸ್ವ–ಇಚ್ಛೆಯಂತೆ ಸಂಬಂಧ ಹೊಂದಿದ್ದಾಗಿ ತಿಳಿಸಿದ್ದಳು. ಅಲ್ಲದೇ ಆತನನ್ನು ಮದುವೆಯಾಗುವುದಾಗಿಯೂ ತಿಳಿಸಿದ್ದಳು.
ನ್ಯಾಯಮೂರ್ತಿಗಳಾದ ಚಿತ್ತ ರಂಜನ್ ದಾಸ್ ಮತ್ತು ಪಾರ್ಥ ಸಾರಥಿ ಸೇನ್ ಅವರನ್ನೊಳಗೊಂಡ ಪೀಠವು, ಹದಿಹರೆಯದವರಲ್ಲಿ ಲೈಂಗಿಕತೆ ಸಾಮಾನ್ಯ. ಆದರೆ ಅಂತಹ ಪ್ರಚೋದನೆ ವ್ಯಕ್ತಿಯ ಕ್ರಿಯೆಯ ಮೇಲೆ ಅವಲಂಬಿತವಾಗಿರುತ್ತದೆ. ಇದಕ್ಕೆ ಪುರುಷ ಅಥವಾ ಮಹಿಳೆ ಹೊರತಾಗಿಲ್ಲ. ಹೆಣ್ಣುಮಕ್ಕಳು ಲೈಂಗಿಕ ಪ್ರಚೋದನೆಗಳನ್ನು ನಿಯಂತ್ರಿಸಬೇಕು. ತಮ್ಮ ದೇಹದ ಸಮಗ್ರತೆ, ಘನತೆ ಮತ್ತು ಸ್ವಾಭಿಮಾನದ ಹಕ್ಕನ್ನು ರಕ್ಷಿಸುವುದು ಯುವತಿಯರ ಕರ್ತವ್ಯ. 2 ನಿಮಿಷದ ಸುಖಕ್ಕಾಗಿ ಸೋಲಬೇಡಿ ಎಂದು ಸಲಹೆ ನೀಡಿತ್ತು.
ಕಲ್ಕತ್ತ ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.