ನವದೆಹಲಿ: ಕರ್ನಾಟಕದಲ್ಲಿ ಮುಸ್ಲಿಮರಿಗಿದ್ದ ಶೇಕಡ 4ರ ಮೀಸಲಾತಿಯನ್ನು ತೆಗೆದು, ಆರ್ಥಿಕ ದುರ್ಬಲ ವರ್ಗಗಳಿಗೆ (ಇಬ್ಲ್ಯುಎಸ್) ವರ್ಗಾಯಿಸಿರುವ ಆದೇಶವನ್ನು ಮೇ 9ರ ವರೆಗೆ ಜಾರಿಗೊಳಿಸದಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ.
ಮೀಸಲಾತಿ ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿಗಳ ವಿಚಾರಣೆಯನ್ನು ಏಪ್ರಿಲ್ 13ರಂದು ನಡೆಸಿದ್ದ ಸುಪ್ರೀಂ ಕೋರ್ಟ್, ಮುಸ್ಲಿಮರ ಮೀಸಲಾತಿ ರದ್ದುಗೊಳಿಸಿರುವ ಕರ್ನಾಟಕ ರಾಜ್ಯ ಸರ್ಕಾರದ ನಿರ್ಧಾರವು ದೋಷ ಪೂರಿತ, ಅಸ್ಥಿರ ಹಾಗೂ ಪ್ರಮಾದದಿಂದ ಕೂಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಹೇಳಿತ್ತು.
ಮಂಗಳವಾರ ವಿಚಾರಣೆ ಮುಂದುವರಿಸಿದ ಸುಪ್ರೀಂ ಕೋರ್ಟ್, ಮೇ 9ರಕ್ಕೆ ವಿಚಾರಣೆ ಮುಂದೂಡಿತು. ಅಲ್ಲಿಯವರೆಗೆ ಮೀಸಲಾತಿ ಜಾರಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.