ನವದೆಹಲಿ: ದೆಹಲಿಯಲ್ಲಿ ಸೇವೆಗಳ ಮೇಲಿನ ನಿಯಂತ್ರಣಕ್ಕೆ ಸಂಬಂಧಿಸಿ ಕೇಂದ್ರ ಮತ್ತು ದೆಹಲಿ ಸರ್ಕಾರಗಳ ಶಾಸಕಾಂಗ ಮತ್ತು ಕಾರ್ಯಾಂಗ ಅವಕಾಶಗಳಲ್ಲಿ ಇರುವ ಕಾನೂನು ಸಮಸ್ಯೆಗಳ ಕುರಿತ ವಿಚಾರಣೆಯನ್ನು ಐವರು ಸದಸ್ಯರ ಸಂವಿಧಾನ ಪೀಠವು ನವೆಂಬರ್ 9ರಂದು ನಡೆಸಲಿದೆ ಎಂದುಸುಪ್ರೀಂ ಕೋರ್ಟ್ ಮಂಗಳವಾರ ತಿಳಿಸಿದೆ.
ಪ್ರತಿನಿತ್ಯದ ಆಧಾರದಲ್ಲಿ ಈ ವಿಚಾರಣೆಯನ್ನು ನಡೆಸಲಾಗುವುದು ಎಂದು ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಐವರು ಸದಸ್ಯರ ಪೀಠ ತಿಳಿಸಿದೆ. ನ್ಯಾಯಮೂರ್ತಿಗಳಾದ ಎಂ.ಆರ್. ಶಾ, ಕೃಷ್ಣ ಮುರಾರಿ, ಹಿಮಾ ಕೋಹ್ಲಿ ಮತ್ತು ಪಿ.ಎಸ್. ನರಸಿಂಹ ಅವರನ್ನು ಪೀಠವು ಒಳಗೊಂಡಿದೆ.
ದೆಹಲಿಯಲ್ಲಿ ಸೇವೆಗಳ ನಿರ್ವಹಣೆಗೆ ಸಂಬಂಧಿಸಿದ ಕಾನೂನಾತ್ಮಕ ಸಮಸ್ಯೆಗಳ ಕುರಿತ ವಿವಾದವನ್ನು ಐವರು ಸದಸ್ಯರ ಸಂವಿಧಾನ ಪೀಠಕ್ಕೆ ನೀಡುವುದಾಗಿ ಸುಪ್ರೀಂ ಕೋರ್ಟ್ ಹೇಳಿತ್ತು. ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದಲ್ಲಿ ಐವರು ಸದಸ್ಯರ ಪೀಠವನ್ನು ರಚಿಸಿರುವುದಾಗಿ ಕೋರ್ಟ್ ಆಗಸ್ಟ್ 22ರಂದು ತಿಳಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.