ADVERTISEMENT

ಸುಪ್ರೀಂ ಕೋರ್ಟ್‌ನ ಅಧಿಕೃತ ಯೂಟ್ಯೂಬ್ ಚಾನಲ್ ಹ್ಯಾಕ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಸೆಪ್ಟೆಂಬರ್ 2024, 11:48 IST
Last Updated 20 ಸೆಪ್ಟೆಂಬರ್ 2024, 11:48 IST
ಸುಪ್ರೀಂ ಕೋರ್ಟ್‌ 
ಸುಪ್ರೀಂ ಕೋರ್ಟ್‌    

ನವದೆಹಲಿ: ಸುಪ್ರೀಂ ಕೋರ್ಟ್‌ನ ಅಧಿಕೃತ ಯೂಟ್ಯೂಬ್‌ ಚಾನಲ್ ಅನ್ನು ಹ್ಯಾಕ್ ಮಾಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಘಟನೆ ಸಂಬಂಧ ತಾಂತ್ರಿಕ ತಂಡಕ್ಕೆ ಮಾಹಿತಿ ನೀಡಲಾಗಿದೆ. ಜತೆಗೆ, ಅಧಿಕಾರಿಗಳು ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದಾರೆ ತಿಳಿದುಬಂದಿದೆ.

ಸುಪ್ರೀಂ ಕೋರ್ಟ್‌ನ ಯೂಟ್ಯೂಬ್‌ ಚಾನಲ್ ಅನ್ನು ತಕ್ಷಣಕ್ಕೆ ಸ್ಥಗಿತಗೊಳಿಸಲಾಗಿದೆ. ಯೂಟ್ಯೂಬ್ ಚಾನಲ್‌ನ ಸೇವೆಗಳನ್ನು ಶೀಘ್ರದಲ್ಲೇ ಪುನರಾರಂಭಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.

ADVERTISEMENT

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.