ಮುಂಬೈ: ’ಕರ್ನಾಟಕದ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಧಾರ್ಮಿಕ ಘೋಷಣೆಗಳನ್ನು ಮಾಡುತ್ತಿರುವುದು ನನಗೆ ಆಶ್ಚರ್ಯ ತಂದಿದೆ‘ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.
ಚುನಾವಣೆಯಲ್ಲಿ ಧರ್ಮ ಅಥವಾ ಧಾರ್ಮಿಕ ವಿಷಯವನ್ನು ಕೈಗೆತ್ತಿಕೊಂಡಾಗ ಅದು ವಿಭಿನ್ನ ರೀತಿಯ ವಾತಾವರಣವನ್ನು ಸೃಷ್ಟಿಸುತ್ತದೆ. ಅದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಪವಾರ್ ಸ್ಥಳೀಯ ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ.
ಪಂಢರಪುರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚುನಾವಣೆಯಲ್ಲಿ ಸ್ಪರ್ಧಿಸುವ ಸಮಯದಲ್ಲಿ ನಾವು ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ಜಾತ್ಯತೀತತೆಯ ರಕ್ಷಣೆಗಾಗಿ ಪ್ರಮಾಣ ವಚನ ಸ್ವೀಕರಿಸಿರುತ್ತೇವೆ. ನೀವು ಚುನಾವಣೆಯಲ್ಲಿ ಧರ್ಮ ಅಥವಾ ಧಾರ್ಮಿಕ ವಿಚಾರವನ್ನು ಕೈಗೆತ್ತಿಕೊಂಡಾಗ ಅದು ವಿಭಿನ್ನ ರೀತಿಯ ವಾತಾವರಣವನ್ನು ಸೃಷ್ಟಿಸುತ್ತದೆ’ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.