ADVERTISEMENT

ಯುಪಿ | RPF ಕಾನ್‌ಸ್ಟೆಬಲ್‌ಗಳ ಹತ್ಯೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಬಲಿ

ಪಿಟಿಐ
Published 24 ಸೆಪ್ಟೆಂಬರ್ 2024, 5:13 IST
Last Updated 24 ಸೆಪ್ಟೆಂಬರ್ 2024, 5:13 IST
   

ಲಖನೌ: ಉತ್ತರ ಪ್ರದೇಶದ ಘಾಜಿಪುರ ಜಿಲ್ಲೆಯಲ್ಲಿ ಇಬ್ಬರು ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್) ಸಿಬ್ಬಂದಿಯ ಹತ್ಯೆ ಪ್ರಕರಣದ ಆರೋಪಿಯನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ತಡರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಮದ್ಯ ಕಳ್ಳಸಾಗಣೆದಾರ ಮೊಹಮ್ಮದ್ ಜಾಹಿದ್ ಅಲಿಯಾಸ್ ಸೋನು ತೀವ್ರವಾಗಿ ಗಾಯಗೊಂಡಿದ್ದು, ಇಂದು ಮುಂಜಾನೆ ಗಾಜಿಪುರದ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಉತ್ತರ ಪ್ರದೇಶ ವಿಶೇಷ ಕಾರ್ಯ ಪಡೆ (ಎಸ್‌ಟಿಎಫ್) ನೋಯ್ಡಾ ಘಟಕ ಮತ್ತು ಸ್ಥಳೀಯ ಗಾಜಿಪುರ ಪೊಲೀಸ್ ತಂಡವು ಕಾರ್ಯಾಚರಣೆಯ ಭಾಗವಾಗಿತ್ತು ಎಂದು ಹೆಚ್ಚುವರಿ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಅಮಿತಾಬ್ ಯಶ್ ತಿಳಿಸಿದ್ದಾರೆ.

ADVERTISEMENT

ಆಗಸ್ಟ್ 20ರಂದು ಅಕ್ರಮ ಮದ್ಯ ಸಾಗಾಟವನ್ನು ತಡೆಯಲು ಪ್ರಯತ್ನಿಸುತ್ತಿದ್ದ ವೇಳೆ ಬಾರ್ಮರ್ ಗುವಾಹಟಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಆರ್‌ಪಿಎಫ್ ಕಾನ್‌ಸ್ಟೆಬಲ್‌ಗಳಾದ ಜಾವೇದ್ ಖಾನ್ ಮತ್ತು ಪ್ರಮೋದ್ ಕುಮಾರ್ ಅವರನ್ನು ಹತ್ಯೆ ಮಾಡಲಾಗಿತ್ತು ಎಂದು ಯಶ್ ವಿವರಿಸಿದ್ದಾರೆ.

ಮದ್ಯ ಕಳ್ಳಸಾಗಣೆದಾರರು ಜಾವೇದ್ ಖಾನ್ ಮತ್ತು ಪ್ರಮೋದ್ ಕುಮಾರ್‌ರನ್ನು ಅಮಾನುಷವಾಗಿ ಥಳಿಸಿ ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಎಸೆದಿದ್ದರು. ಇದರ ಪರಿಣಾಮವಾಗಿ ಅವರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು.

ಆರ್‌ಪಿಎಫ್ ಕಾನ್‌ಸ್ಟೆಬಲ್‌ಗಳ ಹತ್ಯೆ ಪ್ರಕರಣದ ಪ್ರಮುಖ ಆರೋಪಿ 25 ವರ್ಷದ ಜಾಹಿದ್ ಅಲಿಯಾಸ್ ಸೋನು ಬಗ್ಗೆ ಸುಳಿವು ನೀಡಿದವರಿಗೆ ₹1 ಲಕ್ಷ ಬಹುಮಾನ ಘೋಷಿಸಲಾಗಿತ್ತು. ಪ್ರಕರಣ ಸಂಬಂಧ ಕಾರ್ಯಾಚರಣೆ ನಡೆಸಿ ಈಗಾಗಲೇ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.