ಜಮ್ಮು: ಜಮ್ಮು ನಗರದ ಹೊರವಲಯದಲ್ಲಿರುವ ತ್ರಿಕೂಟನಗರದಲ್ಲಿ ಸ್ಫೋಟಕ ವಸ್ತುಗಳ ಸಮೇತ, ಶಂಕಿತ ಉಗ್ರನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಬಂಧಿತ ಉಗ್ರ ಬನಿಹಾಲ್ ನಿವಾಸಿಯಾಗಿದ್ದು, ಈತನನ್ನು ಶನಿವಾರ ತಡರಾತ್ರಿ ಬಂಧಿಸಲಾಗಿದೆ. ಈ ಪ್ರಕರಣ ಕುರಿತು ತನಿಖೆ ನಡೆಯುತ್ತಿದೆ ಎಂದೂ ಅಧಿಕಾರಿಗಳು ಹೇಳಿದ್ದಾರೆ.
ಸ್ಫೋಟಕವಸ್ತುಗಳ ಸಮೇತ ಶಂಕಿತ ಉಗ್ರನನ್ನು ಬಂಧಿಸಿರುವ ಹಿನ್ನೆಲೆಯಲ್ಲಿ ಜಮ್ಮು ಪ್ರಾಂತ್ಯದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.