ADVERTISEMENT

ಅಸ್ಸಾಂನಲ್ಲಿ ಉಲ್ಫಾ ಉಗ್ರರ ಅಟ್ಟಹಾಸ; ಗುಂಡೇಟಿಗೆ ಐವರು ಬಲಿ

ಏಜೆನ್ಸೀಸ್
Published 2 ನವೆಂಬರ್ 2018, 5:59 IST
Last Updated 2 ನವೆಂಬರ್ 2018, 5:59 IST
   

ಗುವಾಹಟಿ: ಅಸ್ಸಾಂನ ತಿನ್ಸುಕಿಯಾ ಜಿಲ್ಲೆಯ ಖೆರೋನಿ ಎಂಬಲ್ಲಿ ಗುರುವಾರ ತಡರಾತ್ರಿ ಶಂಕಿತ ಉಲ್ಫಾ ಉಗ್ರರು ಅಟ್ಟಹಾಸ ಮೆರೆದಿದ್ದು, ಒಂದೇ ಕುಟುಂಬದ ಮೂವರು ಸೇರಿದಂತೆ ಐದು ಮಂದಿಯನ್ನು ಹತ್ಯೆಗೈದಿದ್ದಾರೆ.

ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದಾಳಿಯು ಪರೇಶ್ ಬರುಹಾ ನೇತೃತ್ವದಲ್ಲಿ ನಡೆದಿದ್ದು, ಐವರನ್ನು ಲೋಹಿತ್ ನದಿಯ ತೀರದಲ್ಲಿ ಗುಂಡಿಕ್ಕಿ ಹತ್ಯೆಗೈಯ್ಯಲಾಗಿದೆ. ಬೆಂಗಾಲಿ ಸಮುದಾಯದವರನ್ನು ಗುರಿಯಾಗಿಸಿಕೊಂಡು ಈ ಕೃತ್ಯ ನಡೆದಿರಬಹುದು ಎಂದು ಪೊಲೀಸರು ಹೇಳಿದ್ದಾರೆ.

ಅರುಣಾಚಲ ಪ್ರದೇಶ ಹಾಗೂ ಅಸ್ಸಾಂನ ಗಡಿಭಾಗದಲ್ಲಿ ಭಾರತೀಯ ಸೇನೆ ಕಾರ್ಯಾಚರಣೆ ಆರಂಭಿಸಿದೆ.

ADVERTISEMENT

ರಾಜ್ಯದಾದ್ಯಂತ ಪ್ರತಿಭಟನೆ:

‌ಈ ದುಷ್ಕೃತ್ಯವನ್ನು ಖಂಡಿಸಿದ ಪಶ್ಚಿಮ ಬಂಗಾಳದ ಸಂಘಟನೆಗಳು ತಿನ್ಸುಕಿಯಾ ಜಿಲ್ಲೆಯಲ್ಲಿ 12 ಗಂಟೆಗಳ ಬಂದ್‌ಗೆ ಕರೆನೀಡಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬೆಂಬಲ ಸೂಚಿಸುವುದಾಗಿ ಹೇಳಿದ್ದಾರೆ.

ಈ ಅಮಾನವೀಯ ಕೃತ್ಯವನ್ನು ಖಂಡಿಸಿ ಟ್ವೀಟ್ ಮಾಡಿದ ಗೃಹ ಸಚಿವ ರಾಜನಾಥ್ ಸಿಂಗ್, ಇದೊಂದು ಅವಿವೇಕದ ಹೀನಾ ಕೃತ್ಯ. ಇದರ ಹಿಂದಿರುವ ದುಷ್ಕರ್ಮಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಸ್ಸಾಂನ ಮುಖ್ಯಮಂತ್ರಿ ಸರ್ವಾನಂದ ಸೋನೊವಾಲ್‌ ಅವರಿಗೆ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.