ಕೋಲ್ಕತ್ತ: ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾದ ನಾಯಕಿಯೊಬ್ಬರ ಮೇಲೆ ಟಿಎಂಸಿ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂದು ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ಆರೋಪಿಸಿದ್ದಾರೆ.
‘ಈ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗಕ್ಕೆ ದೂರು ನೀಡಲಾಗಿದೆ. ಅವರು ಶೀಘ್ರ ತನಿಖೆ ನಡೆಸಲಿ’ ಎಂದು ಆಗ್ರಹಿಸಿದ್ದಾರೆ.
‘ಕೂಚ್ ಬಿಹಾರ ಜಿಲ್ಲೆಯ ಗೋಖಸ್‌ದಂಗದಲ್ಲಿ ಜೂನ್ 25ರಂದು ಟಿಎಂಸಿ ಕಾರ್ಯಕರ್ತರು ಬಿಜೆಪಿ ನಾಯಕಿ ಮೇಲೆ ಹಲ್ಲೆ ನಡೆಸಿದ್ದಾರೆ. ಸಾರ್ವಜನಿಕವಾಗಿ ಅವರ ವಸ್ತ್ರವನ್ನು ಹರಿದಿದ್ದಾರೆ. ಸಂತ್ರಸ್ತೆ ಆಸ್ಪತ್ರೆಗೆ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ತಿಳಿಸಿದ್ದಾರೆ.
‘ಬಿಜೆಪಿಯನ್ನು ಬೆಂಬಲಿಸುವ ಕಾರಣಕ್ಕೆ ನನ್ನ ಮೇಲೆ ಟಿಎಂಸಿಯ ಗೂಂಡಾಗಳು ಹಲ್ಲೆ ನಡೆಸಿದ್ದಾರೆ’ ಎಂದು ಸಂತ್ರಸ್ತೆ ತಿಳಿಸಿದ್ದಾರೆ.
‘ರಾಜಕೀಯ ಪ್ರೇರಿತವಾಗಿ ಆಧಾರರಹಿತ ಆರೋಪವನ್ನು ಮಾಡಲಾಗುತ್ತಿದೆ. ಇದು ಜಾಗದ ವಿಷಯಕ್ಕೆ ಸಂಬಂಧಿಸಿದ ವಿವಾದವಾಗಿದೆ’ ಎಂದು ಟಿಎಂಸಿಯ ಕೂಚ್ ಬಿಹಾರ್ ಜಿಲ್ಲಾ ಘಟಕದ ಅಧ್ಯಕ್ಷರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.