ನವದೆಹಲಿ: ಕೃತಕ ಬುದ್ಧಿಮತ್ತೆ (ಎಐ) ತಂತ್ರಾಂಶವೂ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿದ ‘ಡ್ರೋನ್‌ಗಳ ಸಮೂಹ’ ವನ್ನು ಸಶಸ್ತ್ರ ಪಡೆಗಳಿಗೆ ಸೇರ್ಪಡೆ ಮಾಡಲಾಗುತ್ತಿದೆ.
ಗುರಿಗಳನ್ನು ನಿಖರವಾಗಿ ಗುರುತಿಸಿ, ಧ್ವಂಸ ಮಾಡಲು ಈ ಡ್ರೋನ್‌ಗಳಲ್ಲಿನ ಕೃತಕ ಬುದ್ಧಿಮತ್ತೆ ತಂತ್ರಾಂಶ ನೆರವಾಗಲಿದೆ ಎಂದು ಮೂಲಗಳು ಹೇಳಿವೆ.
ಹೆಸರೇ ಹೇಳುವಂತೆ ‘ಡ್ರೋನ್‌ಗಳ ಸಮೂಹ’ವು ನಿರ್ದಿಷ್ಟ ಸಂಖ್ಯೆಯ ಡ್ರೋನ್‌ಗಳನ್ನು ಒಳಗೊಂಡಿರುತ್ತದೆ. ಈ ‘ಡ್ರೋನ್ ಸಮೂಹ’ವನ್ನು ಒಂದೇ ಕೇಂದ್ರದಿಂದ ನಿಯಂತ್ರಿಸಲಾಗುತ್ತದೆ ಎಂದು ಭಾರತೀಯ ಸೇನೆಯು ಶುಕ್ರವಾರ ಟ್ವೀಟ್ ಮಾಡಿದೆ.
‘ಯಾವುದೇ ಕಾರ್ಯಾಚರಣೆ ಕೈಗೊಂಡ ಸಂದರ್ಭದಲ್ಲಿ ವಿವಿಧ ಕಾರಣಗಳಿಂದಾಗಿ ಕೆಲವು ಡ್ರೋನ್‌ಗಳು ಕಾರ್ಯ ನಿಲ್ಲಿಸಿದರೂ, ‘ಸಮೂಹ’ವು ತನ್ನ ಕಾರ್ಯವನ್ನು ಪೂರ್ಣಗೊಳಿಸಿ ಹಿಂದಿರುಗುತ್ತದೆ’ ಎಂದು ಸೇನೆಯ ಸಾರ್ವಜನಿಕ ಮಾಹಿತಿ ವಿಭಾಗದ ಹೆಚ್ಚುವರಿ ಮಹಾನಿರ್ದೇಶನಾಲಯ ಟ್ವೀಟ್ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.