ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಸಿಬ್ಬಂದಿ ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಎಎಪಿಯ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಆರೋಪಿಸಿದ್ದಾರೆ ಎಂದು ಸಿವಿನ್ ಲೈನ್ಸ್ ಪೊಲೀಸ್ ಠಾಣಾ ಅಧಿಕಾರಿಗಳು ತಿಳಿಸಿದರು. ಆದರೆ ಈ ಬಗ್ಗೆ ಔಪಚಾರಿಕ ದೂರು ನೀಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಬ್ಬಂದಿಯೊಂದಿಗೆ ಮಾತಿನ ಚಕಮಕಿಯ ನಂತರ ಮಲಿವಾಲ್ ಅವರು ಪಿಸಿಆರ್ ಕರೆಗಳನ್ನು ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಎರಡು ಕರೆಗಳನ್ನು ಮಾಡಲಾಗಿದೆ. ಆ ಬಳಿಕ ಸಿವಿಲ್ ಲೈನ್ಸ್ ಠಾಣೆಯ ತಂಡವೊಂದು ಮುಖ್ಯಮಂತ್ರಿ ನಿವಾಸಕ್ಕೆ ತೆರಳಿದೆ ಎಂದು ಹೇಳಿದರು.
ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ನಿವಾಸದಿಂದಾಗಲೀ, ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷದಿಂದಾಗಲೀ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.