ನವದೆಹಲಿ: ಎಎಪಿ ಸಂಸದೆ ಸ್ವಾತಿ ಮಾಲೀವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ವಿರುದ್ಧ 500 ಪುಟಗಳ ದೋಷಾರೋಪ ಪಟ್ಟಿಯನ್ನು ಪೊಲೀಸರು ಮಂಗಳವಾರ ಸಲ್ಲಿಸಿದರು.
ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಗೌರವ್ ಗೋಯಲ್ ಅವರಿಗೆ ದೋಷಾರೋಪ ಪಟ್ಟಿ ಸಲ್ಲಿಸಿದರು. ನಂತರ ಗೋಯಲ್ ಅವರು, ಬಿಭವ್ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 30ರವರೆಗೆ ವಿಸ್ತರಿಸಿದರು.
ವಿಚಾರಣೆ ವೇಳೆ ಪ್ರಾಸಿಕ್ಯೂಷನ್, ದೋಷಾರೋಪ ಪಟ್ಟಿಯಲ್ಲಿ 50 ಸಾಕ್ಷಿಗಳ ಹೇಳಿಕೆಗಳಿವೆ ಎಂದು ತಿಳಿಸಿತು.
ಬಿಭವ್ ಕುಮಾರ್ ಅವರು ಮೇ 13ರಂದು ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಮಾಲೀವಾಲ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವಿದೆ.
ಪ್ರಕರಣದ ಸಂಬಂಧ ಮೇ 18ರಂದು ಬಿಭವ್ ಅವರನ್ನು ಬಂಧಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.