ADVERTISEMENT

ಸಂಸದೆ ಸ್ವಾತಿ ಮೇಲೆ ಹಲ್ಲೆ ಪ್ರಕರಣ: ಸುಪ್ರೀಂ ಕೋರ್ಟ್ ಮೊರೆ ಹೋದ ಬಿಭವ್‌

ಪಿಟಿಐ
Published 25 ಜುಲೈ 2024, 13:36 IST
Last Updated 25 ಜುಲೈ 2024, 13:36 IST
ಬಿಭವ್‌ ಕುಮಾರ್‌ 
ಬಿಭವ್‌ ಕುಮಾರ್‌    

ನವದೆಹಲಿ: ಎಎಪಿಯ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ತಮಗೆ ಜಾಮೀನು ನೀಡಲು ನಿರಾಕರಿಸಿದ ದೆಹಲಿ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಜುಲೈ 19ರಂದು ಬಿಭವ್‌ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಜುಲೈ 24ರಂದು ಅರ್ಜಿ ನೋಂದಣಿಯಾಗಿದೆ. ‘ನನ್ನ ಮೇಲಿನ ಎಲ್ಲಾ ಆರೋಪಗಳು ಸುಳ್ಳು. ಈಗಾಗಲೇ ಪ್ರಕರಣದ ತನಿಖೆ ಮುಗಿದಿರುವುದರಿಂದ ನನ್ನನ್ನು ಕಸ್ಟಡಿಯಲ್ಲಿ ಇರಿಸುವ ಅಗತ್ಯವಿಲ್ಲ’ ಎಂದು ಬಿಭವ್‌ ಅರ್ಜಿಯಲ್ಲಿ ಹೇಳಿದ್ದಾರೆ. 

ಕೇಜ್ರಿವಾಲ್‌ ಅವರ ಅಧಿಕೃತ ನಿವಾಸದಲ್ಲಿ ಮೇ 13ರಂದು ಸ್ವಾತಿ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ16ರಂದು ಬಿಭವ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು. ಬಳಿಕ ಮೇ18ರಂದು ಅವರನ್ನು ಪೊಲೀಸರು ಬಂಧಿಸಿದ್ದರು. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. 

ADVERTISEMENT
ಜಾಮೀನು ನೀಡದ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಅರ್ಜಿ  ನನ್ನ ಮೇಲಿನ ಆರೋಪಗಳು ಸುಳ್ಳು ಎಂದು ಹೇಳಿಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.