ನವದೆಹಲಿ: ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಾಲಿವಾಲ್ ಮೇಲೆ ಹಲ್ಲೆ ನಡೆಸಿರುವ ಆರೋಪ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರಿಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.
‘ಬಿಭವ್ ಅವರಿಗೆ ಜಾಮೀನು ನೀಡಲು ಯಾವುದೇ ಕಾರಣವಿಲ್ಲ’ ಎಂದು ನ್ಯಾಯಮೂರ್ತಿ ಅನೂಪ್ ಕುಮಾರ್ ಮೆಂಡಿರಟ್ಟ ಅವರು ಜಾಮೀನು ಅರ್ಜಿಯನ್ನು ವಜಾಗೊಳಿಸಿದರು.
ಕೇಜ್ರಿವಾಲ್ ಅವರ ಅಧಿಕೃತ ನಿವಾಸದಲ್ಲಿ ಸ್ವಾತಿ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ16ರಂದು ಬಿಭವ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಬಳಿಕ ಮೇ18 ರಂದು ಅವರನ್ನು ಪೊಲೀಸರು ಬಂಧಿಸಿದರು. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದು, ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.