ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ಅವರ ಫೋನ್ ಕರೆ ವಿವರಗಳನ್ನು ಪರಿಶೀಲಿಸಬೇಕು ಎಂದು ರಾಷ್ಟ್ರೀಯ ಮಹಿಳಾ ಆಯೋಗ ಒತ್ತಾಯಿಸಿದೆ.
ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಅವರ ಮೇಲೆ, ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಮೇ 13 ರಂದು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಬಿಭವ್ ಕುಮಾರ್ ಮೇಲಿದೆ.
ಮಾಲಿವಾಲ್ ಅವರು ಮುಖ್ಯಮಂತ್ರಿಗಳ ನಿವಾಸದ ಆವರಣ ಪ್ರವೇಶಿಸುತ್ತಿದ್ದಂತೆ, ಬಿಭವ್ ಕುಮಾರ್ ಅವರನ್ನು ಅಲ್ಲಿಗೆ ಕರೆಸಿಕೊಳ್ಳಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಸೇರಿದಂತೆ ಸಂಬಂಧಪಟ್ಟ ಎಲ್ಲರ ಕರೆ ವಿವರಗಳನ್ನು ಪರಿಶೀಲಿಸಿ, ತನಿಖೆಗೆ ಒಳಪಡಿಸಬೇಕು ಎಂದು ಎನ್‌ಸಿಡಬ್ಲ್ಯು ಆಗ್ರಹಿಸಿದೆ.
ಜಾಮೀನು ಅರ್ಜಿ ವಜಾ
ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಬಿಭವ್ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ವಜಾ ಮಾಡಿದೆ.ಮಾಲಿವಾಲ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.