ADVERTISEMENT

ಕೋವಿಡ್‌–19 ಸೋಂಕಿತ ತಬ್ಲೀಗಿ ಜಮಾತ್‌ ಸದಸ್ಯ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2020, 13:45 IST
Last Updated 11 ಏಪ್ರಿಲ್ 2020, 13:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಕೊರೊನಾ ವೈರಸ್‌ ಸೋಂಕಿತ ಹಾಗೂ ತಬ್ಲೀಗಿ ಜಮಾತ್‌ ಸದಸ್ಯ ಶನಿವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಮಾರ್ಚ್‌ 6 ರಿಂದ 8ರವರೆಗೆ ದೆಹಲಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದರು. ನಂತರ ಇತರೆ ಸದಸ್ಯರೊಂದಿಗೆ ಮುಂಬೈಗೆ ಬಂದಿದ್ದ ಇವರು ಮೂಲತಹ ಅಸ್ಸಾಂ ರಾಜ್ಯದವರು ಎಂದು ಪೊಲೀಸರು ತಿಳಿಸಿದ್ದಾರೆ.

ಸೋಂಕು ದೃಢಪಟ್ಟಿದ್ದರಿಂದ ಆಸ್ಪತ್ರೆಯ ವಿಶೇಷ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಬೆಳಗಿನ ಜಾವ ಬಾತ್‌ ರೂಮಿನಲ್ಲಿ ಬ್ಲೇಡಿನ ಮೂಲಕ ಕತ್ತು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.