ನವದೆಹಲಿ: ರಾಮ ದೇವರ ಆದರ್ಶಗಳಿಂದ ಸ್ಫೂರ್ತಿ ಪಡೆದು ಜನರ ಸೇವೆ ಸಲ್ಲಿಸಲು ನಮ್ಮ ಸರ್ಕಾರ ಯತ್ನಿಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಂಗಳವಾರ ಹೇಳಿದ್ದಾರೆ.
ಕೆಂಪು ಕೋಟೆಯಲ್ಲಿ ದಸರಾ ಹಬ್ಬದ ಆಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬರು ಉತ್ತಮ ಶಿಕ್ಷಣ, ಆರೋಗ್ಯ ಮತ್ತು ಉಚಿತ ವಿದ್ಯುತ್‌ನಂತಹ ಸೌಲಭ್ಯಗಳನ್ನು ಪಡೆಯಬೇಕು ಎಂಬುದನ್ನು ಸರ್ಕಾರ ಖಾತ್ರಿಪಡಿಸಿಕೊಳ್ಳುತ್ತಿದೆ ಎಂದು ಅವರು ಹೇಳಿದರು.
ಶ್ರೀರಾಮ ದೇವರು ನಮಗೆ ಆದರ್ಶ. ಅವರ ಜೀವನ ಮತ್ತು ರಾಮರಾಜ್ಯದ ಕಲ್ಪನೆಯಿಂದ ಕಲಿಯುವುದು ಬಹಳಷ್ಟಿದೆ. ಯಾರೂ ಹಸಿವಿನಿಂದ ನಿದ್ರಿಸಬಾರದು ಎಂಬುದರತ್ತ ನಮ್ಮ ಪ್ರಯತ್ನ ಎಂದು ಅವರು ಹೇಳಿದರು.
ರಾಮನಿಂದ ಸ್ಫೂರ್ತಿ ಪಡೆದು ನಿಮ್ಮ ಮಗನಾಗಿ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತಿದ್ದೇನೆ. ಏನಾದರೂ ಮಾಡಲು ಬಾಕಿ ಉಳಿದಿದ್ದರೆ ನಿಮ್ಮ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.