ಕಾಬುಲ್: ಬ್ಯೂಟಿ ಪಾರ್ಲರ್‌ಗಳನ್ನು ಮುಚ್ಚುವಂತೆ ತಾಲಿಬಾನ್ ಆಡಳಿತ ನೀಡಿರುವ ಆದೇಶದ ವಿರುದ್ಧ ಅಫ್ಗಾನಿಸ್ತಾನದ ಹಲವು ಮಹಿಳೆಯರು ಬುಧವಾರ ಪ್ರತಿಭಟನೆ ನಡೆಸಿದರು. ಅವರನ್ನು ಚದುರಿಸಲು ಭದ್ರತಾ ಪಡೆಗಳು ಅಶ್ರುವಾಯು ಮತ್ತು ಗಾಳಿಯಲ್ಲಿ ಗುಂಡು ಹಾರಿಸಿದರು.
ದೇಶದಲ್ಲಿರುವ ಎಲ್ಲಾ ಬ್ಯೂಟಿ ಪಾರ್ಲರ್‌ಗಳನ್ನು ಮುಚ್ಚಲು ಒಂದು ತಿಂಗಳ ಕಾಲಾವಕಾಶ ನೀಡುವುದಾಗಿ ತಾಲಿಬಾನ್ ತಿಂಗಳ ಹಿಂದೆಯೇ ಎಚ್ಚರಿಕೆ ನೀಡಿತ್ತು. ಈ ನೀತಿಯು ಮಹಿಳಾ ಉದ್ಯಮಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ಅಂತರರಾಷ್ಟ್ರೀಯ ಮಟ್ಟದ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದರು.
ಬ್ಯೂಟಿ ಪಾರ್ಲರ್ ಸೇವೆಗಳು ಇಸ್ಲಾಂ ಧರ್ಮದಲ್ಲಿ ನಿಷಿದ್ಧವಾಗಿರುವುದರಿಂದ ಈ ಸೇವೆಗಳನ್ನು ನಿಷೇಧಿಸಲಾಗಿದೆ ಎಂದು ತಾಲಿಬಾನ್ ಹೇಳಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.