ADVERTISEMENT

ಹಿಂದೂಗಳು ಬಹುಸಂಖ್ಯಾತರಾಗಿರುವ ವರೆಗೆ ಸಂವಿಧಾನದ ಬಗ್ಗೆ ಮಾತುಕತೆ:ಗುಜರಾತ್ ಡಿಸಿಎಂ

ಪಿಟಿಐ
Published 28 ಆಗಸ್ಟ್ 2021, 9:49 IST
Last Updated 28 ಆಗಸ್ಟ್ 2021, 9:49 IST
ನಿತಿನ್ ಪಟೇಲ್
ನಿತಿನ್ ಪಟೇಲ್   

ಅಹಮದಾಬಾದ್: ದೇಶದಲ್ಲಿಹಿಂದೂಗಳು ಬಹುಸಂಖ್ಯಾತರಾಗಿರುವ ವರೆಗೆ ಮಾತ್ರ ಸಂವಿಧಾನ, ಕಾನೂನುಗಳು ಮತ್ತು ಜಾತ್ಯತೀತೆಯ ಬಗ್ಗೆ ಮಾತುಕತೆಗಳು ನಡೆಯಲಿದೆ. ಹಿಂದೂಗಳು ಅಲ್ಪಸಂಖ್ಯಾತರಾದರೆ ನ್ಯಾಯಾಲಯಗಳು, ಲೋಕಸಭೆ, ಸಂವಿಧಾನ, ಜಾತ್ಯತೀತತೆ ಯಾವುದೂ ಉಳಿಯುವುದಿಲ್ಲ ಎಂದು ಗುಜರಾತ್ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಹೇಳಿದ್ದಾರೆ.

'ಈ ದೇಶದಲ್ಲಿ ಹಿಂದೂ ಬಹುಸಂಖ್ಯಾತರಾಗಿರುವ ವರೆಗೆ ಮಾತ್ರ ಸಂವಿಧಾನ, ಕಾನೂನು, ಜಾತ್ಯತೀತತೆ ಬಗ್ಗೆ ಮಾತನಾಡಬಹುದು. ಆದರೆ ಇನ್ನೊಂದು1000ದಿಂದ 2000 ವರ್ಷಗಳಲ್ಲಿ ಹಿಂದೂಗಳ ಸಂಖ್ಯೆ ಕಡಿಮೆಯಾಗಿ ಇತರೆ ಜನರ ಸಂಖ್ಯೆಯು ಹೆಚ್ಚಾಗುತ್ತದೆ. ಆವಾಗ ಅಲ್ಲಿ ಯಾವುದೇ ನ್ಯಾಯಾಲಯ, ಲೋಕಸಭೆ, ಸಂವಿಧಾನ, ಜಾತ್ಯತೀತತೆ ವ್ಯವಸ್ಥೆ ಇರುವುದಿಲ್ಲ. ಎಲ್ಲವೂ ಗಾಳಿಯಲ್ಲಿ ಮಾಯವಾಗುತ್ತದೆ' ಎಂದಿದ್ದಾರೆ.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಗಾಂಧಿನಗರದಲ್ಲಿ ಆಯೋಜಿಸಿದ ಭಾರತ ಮಾತೆಯ ದೇವಾಲಯದ ಮೂರ್ತಿ ಪ್ರತಿಷ್ಠಾಪನೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, 'ನಾನು ಮುಸ್ಲಿಂ, ಕ್ರಿಶ್ಚಿಯನ್ನರನ್ನು ಉದ್ದೇಶಿಸಿ ಮಾತನಾಡುತ್ತಿಲ್ಲ. ಏಕೆಂದರೆ ಅವರಲ್ಲೂ ಹೆಚ್ಚಿನವರು ದೇಶಪ್ರೇಮಿಗಳಾಗಿದ್ದಾರೆ' ಎಂದಿದ್ದಾರೆ.

'ನಾನು ಅವರೆಲ್ಲರ ಬಗ್ಗೆ ಮಾತನಾಡುವುದಿಲ್ಲ. ಲಕ್ಷಾಂತರ ಕ್ರಿಸ್ಟಿಯನ್ ಹಾಗೂ ಮುಸ್ಲಿಂಮರು ದೇಶಭಕ್ತರಾಗಿದ್ದಾರೆ. ಸಾವಿರಾರು ಮುಸ್ಲಿಂಮರು ಸೇನೆ ಹಾಗೂ ಗುಜರಾತ್ ಪೊಲೀಸ್‌ ಪಡೆಯಲ್ಲಿದ್ದಾರೆ. ಆದರೆ ದೇಶಭಕ್ತಿ ಹೊಂದಿಲ್ಲದವರ ಬಗ್ಗೆ ಹೇಳುತ್ತಿದ್ದೇನೆ' ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.