ಮುಂಬೈ:ಬಂಡಾಯ ಶಾಸಕರ ಜತೆ ಮಾತುಕತೆ ನಡೆಯುತ್ತಿದ್ದು, ಅವರೆಲ್ಲ ಶಿವಸೇನಾದಲ್ಲೇ ಇರಲಿದ್ದಾರೆ ಎಂದು ಪಕ್ಷದ ನಾಯಕ ಸಂಜಯ್ ರಾವುತ್ ಹೇಳಿದ್ದಾರೆ.
ನಮ್ಮ ಪಕ್ಷವು ಹೋರಾಟದ ಹಿನ್ನೆಲೆಯಲ್ಲಿ ರಚನೆಯಾಗಿದೆ. ನಾವು ಸತತ ಹೋರಾಟ ಮಾಡಲಿದ್ದೇವೆ. ಹೆಚ್ಚೆಂದರೆ ಅಧಿಕಾರ ಕಳೆದುಕೊಳ್ಳಬಹುದು. ಆದರೆ ಹೋರಾಟ ನಿಲ್ಲಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.
ಏಕನಾಥ್ ಶಿಂಧೆ ನಮ್ಮ ಪಕ್ಷದ ಅತಿ ಹಳೆಯ ಸದಸ್ಯ. ಅವರು ನಮ್ಮ ಸ್ನೇಹಿತರು. ನಾವು ದಶಕಗಳಿಂದ ಜತೆಯಾಗಿ ಕೆಲಸ ಮಾಡಿದ್ದೇವೆ. ಅಷ್ಟು ಸುಲಭವಾಗಿ ಬೇರೆಯಾಗುವುದು ಅವರಿಗೂ ನಮಗೂ ಸುಲಭವಲ್ಲ. ಅವರ ಜತೆ ಇಂದು ಬೆಳಿಗ್ಗೆ ಸುಮಾರು ಒಂದು ಗಂಟೆ ಮಾತುಕತೆ ನಡೆಸಿದ್ದೇನೆ. ಪಕ್ಷದ ಅಧ್ಯಕ್ಷರಿಗೂ ಈ ಬಗ್ಗೆ ತಿಳಿಸಲಾಗಿದೆ ಎಂದು ರಾವುತ್ ತಿಳಿಸಿದ್ದಾರೆ.
ಈ ಮಧ್ಯೆ, ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ನಿವಾಸಕ್ಕೆ ಮಹಾರಾಷ್ಟ್ರ ಸಚಿವ ಬಾಳಾಸಾಹೇಬ್ ಪಾಟೀಲ್ ಭೇಟಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.