ADVERTISEMENT

ಡಿಎಂಕೆ ಮುಖವಾಣಿ 'ಮುರಸೋಳಿ' ಪತ್ರಿಕೆ ಸಂಪಾದಕ ಮುರಸೋಳಿ ಸೆಲ್ವಂ ನಿಧನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಅಕ್ಟೋಬರ್ 2024, 16:08 IST
Last Updated 10 ಅಕ್ಟೋಬರ್ 2024, 16:08 IST
<div class="paragraphs"><p>ಮುರಸೋಳಿ ಸೆಲ್ವಂ</p></div>

ಮುರಸೋಳಿ ಸೆಲ್ವಂ

   

ಚೆನ್ನೈ: ತಮಿಳುನಾಡಿನ ಡಿಎಂಕೆ ಪಕ್ಷದ ಮುಖವಾಣಿ 'ಮುರಸೋಳಿ' ಪತ್ರಿಕೆಯ ನಿವೃತ್ತ ಸಂಪಾದಕ ಷಣ್ಮುಗ ಸುಂದರಂ ಸೆಲ್ವಂ (ಮುರಸೋಳಿ ಸೆಲ್ವಂ) ಅವರು ಗುರುವಾರ ಬೆಂಗಳೂರಿನಲ್ಲಿ ನಿಧನರಾದರು.

ಅವರಿಗೆ 82 ವರ್ಷ ವಯಸ್ಸಾಗಿತ್ತು. ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ADVERTISEMENT

ಸೆಲ್ವಂ ಅವರು ಹೃದಯಾಘಾತಕ್ಕೆ ಒಳಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದರು. ಅವರ ಪಾರ್ಥೀವ ಶರೀರವನ್ನು ಅಂತಿಮ ವಿಧಿವಿಧಾನಗಳಿಗಾಗಿ ಚೆನ್ನೈಗೆ ತರಲಾಗಿದೆ.

ಸೆಲ್ವಂ ನಿಧನಕ್ಕೆ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.