ಚೆನ್ನೈ: ತಮಿಳುನಾಡು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್(80) ಅವರಿಗೆ ಕೊರೊನಾ ಸೋಂಕು ಇರುವುದು ಭಾನುವಾರ ದೃಢಪಟ್ಟಿದೆ.
ಪುರೋಹಿತ್ ಅವರಿಗೆ ಹೋಮ್ ಕ್ವಾರಂಟೈನ್ ಆಗಲು ಸೂಚಿಸಲಾಗಿದ್ದು, ಚೆನ್ನೈನ ಕಾವೇರಿ ಆಸ್ಪತ್ರೆಯ ವೈದ್ಯರ ತಂಡದಿಂದ ಚಿಕಿತ್ಸೆ ನಡೆಯುತ್ತಿದೆ.
ರಾಜಭವನದ 84 ನೌಕರರಿಗೆ ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ರಾಜ್ಯಪಾಲರನ್ನು ಪರೀಕ್ಷೆ ಒಳಪಡಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.
'ರಾಜ್ಯಪಾಲರಿಗೆ ಕೊರೊನಾ ಸೋಂಕಿನ ಲಕ್ಷಣಗಳು ಕಂಡುಬಂದಿರಲಿಲ್ಲ. ಪರೀಕ್ಷೆಯ ಬಳಿಕ ಅವರಿಗೆ ಸೋಂಕು ಇರುವುದು ದೃಢವಾಗಿದೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಮತ್ತು ಸ್ಥಿರವಾಗಿದ್ದಾರೆ' ಎಂದು ಕಾವೇರಿ ಆಸ್ಪತ್ರೆ ವೈದ್ಯಾಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.