ನವದೆಹಲಿ: ವಿಧಾನಸಭೆಯಲ್ಲಿ ಅಂಗೀಕಾರಗೊಂಡಿರುವ ಮಸೂದೆಗಳಿಗೆ ಅಂಕಿತ ಹಾಕುವಲ್ಲಿ ರಾಜ್ಯಪಾಲರು ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ತಮಿಳುನಾಡು ಮತ್ತು ಪಂಜಾಬ್ ಸರ್ಕಾರಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿವೆ.
ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರು ಸಂವಿಧಾನಿಕ ಹುದ್ದೆಯಲ್ಲಿದ್ದುಕೊಂಡು, ಬಾಹ್ಯ ಕಾರಣಗಳಿಂದಾಗಿ ಅಸಂವಿಧಾನಿಕ ರೀತಿಯಲ್ಲಿ ಆಡಳಿತಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಈ ವಿಚಾರವಾಗಿ ನ್ಯಾಯಾಲಯವು ಮಧ್ಯಪ್ರವೇಶಿಸಬೇಕೆಂದು ಎಂ.ಕೆ.ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರ ಅರ್ಜಿಯಲ್ಲಿ ಕೋರಿದೆ.
ತಮಿಳುನಾಡು ಸರ್ಕಾರದ ಪರವಾಗಿ ವಕೀಲ ಶಬರೀಶ್ ಸುಬ್ರಮಣಿಯನ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ರಾಜ್ಯ ಸರ್ಕಾರ ಅಂಗೀಕರಿಸಿದ್ದ 27 ಮಸೂದೆಗಳ ಪೈಕಿ 22 ಮಸೂದೆಗಳಿಗೆ ಮಾತ್ರ ಪಂಜಾಬ್ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರು ಅಂಕಿತ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.
12 ಮಸೂದೆಗಳಿಗೆ ರಾಜ್ಯಪಾಲರ ಅಂಕಿತ ಸಿಕ್ಕಿಲ್ಲ ಎಂದು ತಮಿಳುನಾಡು ಸರ್ಕಾರ ಅರ್ಜಿಯಲ್ಲಿ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.