ಚೆನ್ನೈ: ತಮಿಳುನಾಡಿನ ಡಿಎಂಡಿಕೆ ನಾಯಕ ಹಾಗೂ ನಟ ವಿಜಯಕಾಂತ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ಪಕ್ಷದ ಅಧಿಕೃತ ಮೂಲಗಳು ತಿಳಿಸಿವೆ.
ವಿಜಯಕಾಂತ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅವರಿಗೆ ಉಸಿರಾಟದ ಸಮಸ್ಯೆ ಎದುರಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದ ವೈದ್ಯರು ಹೇಳಿದ್ದಾರೆ.
ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆತಂಕಪಡುವ ಅಗತ್ಯ ಇಲ್ಲ ಎಂದು ಡಿಎಂಡಿಕೆ ಪಕ್ಷದ ಅಧಿಕೃತ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.