ನವದೆಹಲಿ: ಗಾಜಾ ಚಂಡಮಾರುತದಿಂದ ಹಾನಿಗೊಳಗಾಗಿರುವ ಪ್ರದೇಶಗಳಲ್ಲಿ ಪರಿಹಾರ ಮತ್ತು ಪುನರ್‌ನಿರ್ಮಾಣ ಕಾರ್ಯ ಕೈಗೊಳ್ಳಲು ಕೇಂದ್ರ ಸರ್ಕಾರವು ₹ 15 ಸಾವಿರ ಕೋಟಿ ವಿಪತ್ತು ಪರಿಹಾರ ನೀಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಗುರುವಾರ ಮನವಿ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಗಾಜಾ ಚಂಡಮಾರುತವು ತಮಿಳುನಾಡಿನಲ್ಲಿ ದೊಡ್ಡ ಪ್ರಮಾಣದ ವಿನಾಶಕ್ಕೆ ಕಾರಣವಾಗಿದೆ. ಗಾಜಾದಿಂದಾದ ವಿನಾಶದ ಬಗ್ಗೆ ಪ್ರಧಾನಿ ಅವರನ್ನು ಭೇಟಿ ಮಾಡಿ ವಿವರ ನೀಡಿದ್ದೇನೆ. ಜ್ಞಾಪನ ಪತ್ರವನ್ನೂ ಸಲ್ಲಿಸಿದ್ದೇನೆ. ಕೇಂದ್ರ ಸರ್ಕಾರದಿಂದ ₹ 15 ಸಾವಿರ ಕೋಟಿ ಪರಿಹಾರವನ್ನು ಕೇಳಿದ್ದೇವೆ. ಮಧ್ಯಂತರ ಪರಿಹಾರವಾಗಿ ₹ 1,500 ಕೋಟಿ ನೀಡುವಂತೆ ಕೋರಿದ್ದೇವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.