ಡೆಹ್ರಾಡೂನ್ : ಭಾರಿ ಮಳೆಯಿಂದಾಗಿ ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿರುವ ಪ್ರಸಿದ್ಧ ತಪಕೇಶ್ವರ ಮಹಾದೇವ ದೇವಸ್ಥಾನದ ಒಂದು ಭಾಗದಲ್ಲಿನ ಗೋಡೆಗಳು ಕುಸಿದು ಬಿದ್ದಿದೆ.
ಶ್ರಾವಣ ಮಾಸದ ಸೋಮವಾರವಾದ ಇಂದು ಬೆಳಿಗ್ಗೆ ದೇವಾಲಯಕ್ಕೆ ಆಗಮಿಸಿದ ಭಕ್ತರಿಗೆ ದೇವಾಲಯದ ಮುಂಭಾಗದಲ್ಲಿ ಗೋಡೆ ಕುಸಿದ ಪರಿಣಾಮ ಒಳಹೋಗಲು ಸಾಧ್ಯವಾಗಲಿಲ್ಲ.
ಕಳೆದ ಕೆಲವು ದಿನಗಳಿಂದ ಉತ್ತರ ಭಾರತದ ರಾಜ್ಯಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ನದಿ, ಅಣೆಕಟ್ಟುಗಳಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ಪ್ರವಾಹ ಸ್ಥಿತಿ ತಲೆದೂರಿದೆ. ಪರಿಣಾಮ ಅನೇಕ ಅವಘಡಗಳೂ ಸಂಭವಿಸಿವೆ.
ಕಳೆದ ವಾರ ಡೆಹ್ರಾಡೂನ್ ನಲ್ಲಿ ಸುರಿದ ಮಳೆಗೆ 50ಕ್ಕೂ ಹೆಚ್ಚು ಜನರಿದ್ದ 15 ಮನೆಗಳು ಧರೆಗುರುಳಿವೆ. ಈ ವೇಳೆ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.