ಕೋಲ್ಕತ್ತ: ಪ್ಯಾಲೆಸ್ಟೀನಿಯನ್ನರ ವಿರುದ್ಧದ ದೌರ್ಜನ್ಯದ ಬಗ್ಗೆ ಮರುಕ ಪಡುವವರು ತಮ್ಮದೇ ದೇಶದಲ್ಲಿ ಅಲ್ಪಸಂಖ್ಯಾತರ ಮೇಲಾಗುತ್ತಿರುವ ದೌರ್ಜನ್ಯದ ಬಗ್ಗೆಯೂ ಮರುಕಪಡಬೇಕು ಎಂದು ಲೇಖಕಿ ತಸ್ಲೀಮಾ ನಸ್ರೀನ್ ಹೇಳಿದ್ದಾರೆ.
‘ಪ್ಯಾಲೆಸ್ಟೀನಿಯನ್ನರ ಮೇಲಾಗುತ್ತಿರುವ ದೌರ್ಜನ್ಯದ ಬಗ್ಗೆ ಬಾಂಗ್ಲಾದೇಶಿಗರು ಆತಂಕಿತರಾಗಿದ್ದಾರೆ. ಅವರಿಗೆ ಸಹಾಯ ಮಾಡಲು ಕೆಲವರು ಪ್ಯಾಲೆಸ್ಟೀನ್‌ಗೆ ತೆರಳಲೂ ಬಯಸಿದ್ದಾರೆ ಎಂದು ಕೇಳ್ಪಟ್ಟೆ. ವೈಯಕ್ತಿಕವಾಗಿ ಜಗತ್ತಿನಲ್ಲಿ ನಡೆಯುವ ಎಲ್ಲಾ ರೀತಿಯ ದೌರ್ಜನ್ಯವನ್ನು ನಾನು ಖಂಡಿಸುತ್ತೇನೆ. ಆದರೆ ಪ್ಯಾಲೆಸ್ಟೀನಿಯನ್ನರ ಬಗ್ಗೆ ಮರುಕ ಪಡುತ್ತಿರುವವರು ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲಾಗುತ್ತಿರುವ ಆಕ್ರಮಣದ ಬಗ್ಗೆಯೂ ಚಿಂತಿಸಬೇಕು’ ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಅವರು ಹೇಳಿದ್ದಾರೆ.
‘ಬಾಂಗ್ಲಾದೇಶವು ಆರ್ಥಿಕ ಬೆಳವಣಿಗೆಯ ಹಾದಿಯಲ್ಲಿ ಸಾಗುತ್ತಿದ್ದರೂ ಮೂಲಭೂತವಾದ ಹೆಚ್ಚುತ್ತಿದೆ. ಲಿಂಗ ಅಸಮಾನತೆ ಪ್ರಮುಖ ಸಮಸ್ಯೆಯಾಗಿ ಮುಂದುವರಿದಿದೆ’ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.