ADVERTISEMENT

AP Assembly polls: ಟಿಡಿಪಿ, ಜನಸೇನಾದ 118 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

ಪಿಟಿಐ
Published 24 ಫೆಬ್ರುವರಿ 2024, 8:05 IST
Last Updated 24 ಫೆಬ್ರುವರಿ 2024, 8:05 IST
<div class="paragraphs"><p>ಎನ್. ಚಂದ್ರಬಾಬು ನಾಯ್ಡು</p></div>

ಎನ್. ಚಂದ್ರಬಾಬು ನಾಯ್ಡು

   

ಅಮರಾವತಿ (ಆಂಧ್ರಪ್ರದೇಶ): ಮುಂಬರುವ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗೆ 118 ಅಭ್ಯರ್ಥಿಗಳ ಮೊದಲ ಜಂಟಿ ಪಟ್ಟಿಯನ್ನು ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಮತ್ತು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ಶನಿವಾರ ಪ್ರಕಟಿಸಿದ್ದಾರೆ.

ಬಿಜೆಪಿ ಮೈತ್ರಿಗೆ ಬಯಸಿದರೆ ಆ ಪಕ್ಷಕ್ಕೆ ಅವಕಾಶ ಕಲ್ಪಿಸುವ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಸೀಟು ಹಂಚಿಕೆ ಮಾಡಲಾಗಿದೆ ಎಂದು ಉಭಯ ನಾಯಕರು ಹೇಳಿದ್ದಾರೆ.

ADVERTISEMENT

ಮೊದಲ ಪಟ್ಟಿಯಂತೆ 94 ಕ್ಷೇತ್ರಗಳಲ್ಲಿ ಟಿಡಿಪಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು , 24 ಸ್ಥಾನಗಳಲ್ಲಿ ಜನಸೇನಾ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ.

ಟಿಡಿಪಿ-ಜನಸೇನಾ ಮೈತ್ರಿ ಕುರಿತು ಉಂಡವಲ್ಲಿಯಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ನಾಯ್ಡು, ಈ ಒಕ್ಕೂಟವು ರಾಜ್ಯದ ಭವಿಷ್ಯಕ್ಕಾಗಿ. ಉತ್ತಮ ಕಾರ್ಯಕ್ಕೆ ಮೊದಲ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.

175 ವಿಧಾನಸಭಾ ಕ್ಷೇತ್ರಗಳ ಪೈಕಿ ಉಳಿದ 57 ಕ್ಷೇತ್ರಗಳಿಗೆ ಸೀಟು ಹಂಚಿಕೆ ಕುರಿತು ಶೀಘ್ರದಲ್ಲೇ ಘೋಷಣೆಯಾಗುವ ನಿರೀಕ್ಷೆಯಿದೆ. ಮೈತ್ರಿಯ ಭಾಗವಾಗಿ ಜನಸೇನಾ ರಾಜ್ಯದ ಒಟ್ಟು 25 ಕ್ಷೇತ್ರಗಳಲ್ಲಿ ಮೂರು ಲೋಕಸಭಾ ಸ್ಥಾನಗಳಿಗೆ ಸ್ಪರ್ಧಿಸಲಿದೆ.

ಸದ್ಯ ಬಿಜೆಪಿಯೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವ ಕುರಿತು ಚರ್ಚೆ ನಡೆಯುತ್ತಿದೆ ಎಂದು ಟಿಡಿಪಿ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.