ಲಖನೌ, ಜೈಪುರ: ಟ್ವೆಂಟಿ–20 ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಜಯಗಳಿಸಿದ್ದಕ್ಕೆ ಸಂಭ್ರಮಾಚರಣೆಯಲ್ಲಿ ತೊಡಗಿದ್ದ ಐವರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ.
ಉತ್ತರ ಪ್ರದೇಶದ ಆಗ್ರಾದಲ್ಲಿ ವ್ಯಾಸಂಗ ಮಾಡುತ್ತಿರುವ ಕಾಶ್ಮೀರದ ಮೂವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು ಐವರನ್ನು ಬಂಧಿಸಲಾಗಿದೆ.
ಇದೇ ವೇಳೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪಾರ್ಹ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ರಾಜಸ್ಥಾನದ ಉದಯಪುರದ ಖಾಸಗಿ ಶಾಲೆಯ ಶಿಕ್ಷಕರೊಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಕ್ಟೋಬರ್ 24 ರಂದು ನಡೆದ ಪಂದ್ಯದ ನಂತರ ದೇಶ ವಿರೋಧಿ ಸಂದೇಶವನ್ನು ಪೋಸ್ಟ್ ಮಾಡಿದ್ದಕ್ಕಾಗಿ ಆಗ್ರಾ, ಬರೇಲಿ, ಬದೌನ್ ಮತ್ತು ಸೀತಾಪುರ ಜಿಲ್ಲೆಗಳಲ್ಲಿ ಒಟ್ಟು ಏಳು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಏಳು ಜನರ ಪೈಕಿ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಮ್ಮ ಟ್ವಿಟರ್ ಖಾತೆಯಲ್ಲಿ ತಿಳಿಸಿದ್ದಾರೆ.
ಆರೋಪಿಗಳ ವಿರುದ್ಧ ಐಪಿಸಿಯ ಸೆಕ್ಷನ್ 105 (ಎ), 505 ಹಾಗೂ ಯುಎಪಿಎ ಸೆಕ್ಷನ್ 13ರ ಅಡಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.