ಬೆಂಗಳೂರು: ಯುವ ಮನಸ್ಸುಗಳಿಗೆ ಪ್ರೇರಣೆ ನೀಡಿ, ಸರಿಯಾದ ಮಾರ್ಗ ತೋರುವ ಮೂಲಕ ದೇಶವನ್ನು ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಶಿಕ್ಷಕರಿಗೆ ದೇಶದ ಗಣ್ಯರು ಗೌರವ ಸಲ್ಲಿಸಿದ್ದಾರೆ. ಜೀವನದಲ್ಲಿ ಎಂದಿಗೂ ಮರೆಯಲಾಗದ ಗುರುಗಳನ್ನು ನೆನಪಿಸಿಕೊಂಡು ನಮಿಸಿದ್ದಾರೆ.
ಮಾಜಿ ರಾಷ್ಟ್ರಪತಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು 1962ರಿಂದ ಶಿಕ್ಷಕರ ದಿನವಾಗಿ ಆಚರಿಸಲಾಗುತ್ತಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿ ಅನೇಕರು ಟ್ವೀಟ್ ಮಾಡಿ ನಮನ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮ್ಮ ಗುರುಗಳಾದ ಎಚ್.ನರಸಿಂಹಯ್ಯ ಅವರನ್ನು ಸ್ಮರಿಸಿ, ಒಳ್ಳೆಯ ಗುರು ಎಂದೆಂದಿಗೂ ಉನ್ನತಿಯ ದಾರಿ ದೀಪ ಎಂದಿದ್ದಾರೆ.
‘ಶಿಕ್ಷಕರು ನಮ್ಮ ಗುರುಗಳು. ಗುರು–ಶಿಷ್ಯ ಪರಂಪರೆ ಜಗತ್ತಿಗೆ ಭಾರತ ನೀಡಿದ ಕೊಡುಗೆ,...’ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೀಟಿಸಿದ್ದಾರೆ.
Today is #TeachersDay. Teachers are our gurus. The guru-sishya parampara is a gift of India to the world. In recognition of the contribution of teachers in schools, colleges and universities, our Govt felicitates outstanding teachers with “Siksha Ratna Samman” on Teachers’ Day
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.