ADVERTISEMENT

ನವರಾತ್ರಿ ಆಚರಣೆಯಲ್ಲಿ ಭಾಗಿಯಾಗಿ ವಾಪಸ್‌ ಆಗುವಾಗ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಪಿಟಿಐ
Published 5 ಅಕ್ಟೋಬರ್ 2024, 11:27 IST
Last Updated 5 ಅಕ್ಟೋಬರ್ 2024, 11:27 IST
<div class="paragraphs"><p>ಪ್ರಾತಿನಿಧಿಕ ಚಿತ್ರ&nbsp;</p></div>

ಪ್ರಾತಿನಿಧಿಕ ಚಿತ್ರ 

   

ವಡೋದರಾ: ಗುಜರಾತಿನ ವಡೋದರಾ ನಗರದ ಹೊರವಲಯದಲ್ಲಿ ನವರಾತ್ರಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಹಿಂದಿರುಗುತ್ತಿದ್ದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ನವರಾತ್ರಿಯ ಆಚರಣೆ ವೇಳೆ ಗಾರ್ಬಾ ನೃತ್ಯ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಸ್‌ ಆಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

‘ನಿನ್ನೆ ತಡರಾತ್ರಿ ನನ್ನ ಬಾಲ್ಯದ ಸ್ನೇಹಿತ ಹಾಗೂ ನಾನು ದ್ವಿಚಕ್ರ ವಾಹನದಲ್ಲಿ ಹಿಂದಿರುಗುತ್ತಿದ್ದೇವು. ಈ ವೇಳೆ ಐವರು ನಮ್ಮನ್ನು ತಡೆದರು. ಸ್ವಲ್ವ ವಾಗ್ವಾದದ ನಂತರ ಇಬ್ಬರು ಹೊರಟು ಹೋದರು. ಆದರೆ ಇನ್ನಿಬ್ಬರು ನನ್ನ ಮೇಲೆ ಅತ್ಯಾಚಾರ ಎಸಗಿದರೆ, ಇನ್ನೋರ್ವ ನನ್ನ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ್ದಾನೆ’ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿ ಪೊಲೀಸರು ಸಾಕ್ಷ್ಯ ಸಂಗ್ರಹಿಸಿದ್ದಾರೆ. ಹತ್ತಿರದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮತ್ತೊಂದು ಪ್ರಕರಣ:

ಇದೇ ರೀತಿಯ ಮತ್ತೊಂದು ಪ್ರಕರಣ ಪುಣೆಯ ಹೊರವಲಯದಲ್ಲಿ ಗುರುವಾರ (ಅ.3) ನಡೆದಿದೆ. 21 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಲಾಗಿದ್ದು, ಈ ವೇಳೆ ಆಕೆಯ ಸ್ನೇಹಿತನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ವರ್ಷದ ನವರಾತ್ರಿ ಹಬ್ಬದ ಪ್ರಯುಕ್ತ ಗಾರ್ಬಾ ಆಚರಣೆಯ ಸಮಯದ ಮೇಲಿನ ನಿರ್ಬಂಧವನ್ನು ಗುಜರಾತ್ ಸರ್ಕಾರ ತೆಗೆದುಹಾಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.