ಪಟ್ನಾ: ಪಕ್ಷದ ಯುವ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಆರ್‌ಜೆಡಿ ನಾಯಕ ತೇಜ್ ಪ್ರತಾಪ್ ಯಾದವ್ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಸೋಮವಾರ ಘೋಷಿಸಿದ್ದಾರೆ.
ತಮ್ಮ ತಂದೆ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಲಾಲು ಪ್ರಸಾದ್ ಯಾದವ್ ಅವರೊಂದಿಗೆ ಸಭೆ ನಡೆಸಿದ ಬಳಿಕ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ಪಕ್ಷದ ನಾಯಕಿ ರಾಬ್ರಿ ದೇವಿಯವರ ಅಧಿಕೃತ ನಿವಾಸವಾದ ಪಾಟ್ನಾದ 10 ಸರ್ಕ್ಯುಲರ್ ರಸ್ತೆಯಲ್ಲಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಆಯೋಜಿಸಿದ್ದ ಇಫ್ತಾರ್ ಕೂಟದ ಸಂದರ್ಭದಲ್ಲಿ ತೇಜ್ ಪ್ರತಾಪ್ ಅವರು, ಆರ್‌ಜೆಡಿ ನಾಯಕ ಅನಿಲ್ ಸಾಮ್ರಾಟ್ ಯಾದವ್ ಅವರನ್ನು 10 ಸರ್ಕ್ಯುಲರ್ ರಸ್ತೆಯಿಂದ ಹೊರಹಾಕುವ ಮೊದಲು ಕಪಾಳಮೋಕ್ಷ ಮಾಡಿದ್ದಾರೆ ಎಂದು ವರದಿಯಾಗಿತ್ತು.
ಅನಿಲ್ ಸಾಮ್ರಾಟ್ ಯಾದವ್ ಅವರು ಈ ವರ್ಷ ಬಿಹಾರದ ಎಂಎಲ್‌ಸಿ ಚುನಾವಣೆಯಲ್ಲಿ ಅರಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.